ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೈಕ್ನಿಂದ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಶಿಕಾರಿಪುರ ಪಟ್ಟಣದ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಗಿರೀಶ್ ಕುಮಾರ್ (36) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬುಧವಾರ ಮಣಿಪಾಲದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ
ಶಿಕಾರಿಪುರ ತಾಲೂಕಿನ ಚಿಕ್ಕಾಪುರ ಗ್ರಾಮದ ಸಮೀಪ ಸುಮಾರು 15 ದಿನಗಳ ಹಿಂದೆ ಗಿರೀಶ್ ಕುಮಾರ್ ಅವರು ಬೈಕ್ನಲ್ಲಿ ತೆರಳುತ್ತಿದ್ದಾಗ ಆಯತಪ್ಪಿ ಬಿದ್ದಿದ್ದರು. ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿತ್ತು.
ತಕ್ಷಣ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ವೈದ್ಯರ ನಿರಂತರ ಪ್ರಯತ್ನಗಳ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.
Shikaripura : ಕುಟುಂಬಸ್ಥರನ್ನು ಅಗಲಿದ ಕಾನ್ಸ್ಟೇಬಲ್
ಮೃತ ಗಿರೀಶ್ ಕುಮಾರ್ ಅವರು ಶಿಕಾರಿಪುರ ತಾಲೂಕಿನ ಸಾಲೂರು ಗ್ರಾಮದ ನಿವಾಸಿಯಾಗಿದ್ದರು. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಗಳಿಸಿದ್ದರು.
Also Read>> ತಾಳಗುಪ್ಪದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಮುಂದಾದ ವ್ಯಕ್ತಿಯ ರಕ್ಷಣೆ; 112 ಪೊಲೀಸರ ಮಾನವೀಯ ಕಾರ್ಯ
ಗಿರೀಶ್ ಕುಮಾರ್ ಅವರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ನಿಧನದಿಂದ ಕುಟುಂಬಸ್ಥರು ಹಾಗೂ ಆತ್ಮೀಯರಲ್ಲಿ ದುಃಖ ಮಡುಗಟ್ಟಿದೆ.
ಪೊಲೀಸ್ ಇಲಾಖೆಯಿಂದ ಸಂತಾಪ
ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಾನ್ಸ್ಟೇಬಲ್ ಗಿರೀಶ್ ಕುಮಾರ್ ಅವರ ನಿಧನಕ್ಕೆ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.
ಯುವ ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನಕ್ಕೆ ಸಹೋದ್ಯೋಗಿಗಳು ಹಾಗೂ ಪರಿಚಿತರು ಕಂಬನಿ ಮಿಡಿದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








