ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ನೈಸರ್ಗಿಕ ಕೃಷಿಯಲ್ಲಿ ರೋಗ ಮತ್ತು ಕೀಟಗಳ ನಿರ್ವಹಣಾ ಅಸ್ತ್ರಗಳನ್ನು ತಯಾರಿಸುವ ವಿಧಾನದ ಗುಂಪು ಚರ್ಚೆ ಮತ್ತು ಪ್ರಾತ್ಯಕ್ಷಿತೆಯನ್ನು ಚಿಕ್ಕಜೋಗಿಹಳ್ಳಿಯ ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ನೈಸರ್ಗಿಕ ಕೃಷಿಯು ರಾಸಾಯನಿಕ ಮುಕ್ತ ಸಾಂಪ್ರದಾಯಿಕ ಕೃಷಿ ವಿಧಾನವಾಗಿದೆ. ಆಧುನಿಕ ಕೃಷಿ ಪದ್ಧತಿಯಲ್ಲಿ ಅತಿಯಾದ ರಾಸಾಯನಿಕ ಗೊಬ್ಬರಗಳು ಹಾಗೂ ಪೀಡೆನಾಶಕಗಳ ಬಳಕೆಯಿಂದಾಗಿ ನೈಸರ್ಗಿಕ ಸಂಪನ್ಮೂಲಗಳಾದ ಭೂಮಿ, ನೀರು, ಸಸ್ಯ ಮತ್ತು ಪ್ರಾಣಿ ಸಂಕುಲಗಳು ಮಲಿನಕೊಳ್ಳುತ್ತಲಿದೆ. ಹವಾಮಾನ ವೈಪರೀತ್ಯತೆಯಿಂದಾಗಿ ಹೆಚ್ಚುತ್ತಿರುವ ಕೀಟ ಮತ್ತು ರೋಗಗಳಿಂದ ಸಸ್ಯಗಳನ್ನು ಸಂರಕ್ಷಿಸಲು ನೈಸರ್ಗಿಕ ಪರಿಕರಗಳನ್ನು ಉಪಯೋಗಿಸಿಕೊಂಡು ಕೀಟ ಮತ್ತು ರೋಗಗಳ ನಿರ್ವಹಣಾ ಅಸ್ತ್ರಗಳ ಬಗ್ಗೆ ಕೃಷಿ ವಿದ್ಯಾರ್ಥಿಗಳು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post