ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಪಟ್ಟಣದಲ್ಲಿ ಹೊಳಿ ಹಬ್ಬದ ಆಚರಣೆ ಮಾಡದಂತೆ ಪೋಲಿಸ್ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತು ಸೂಚನೆ ನೀಡಿದ್ದು, ಕೋವಿಡ್ -19 ರ ಎರಡನೇ ಅಲೆಯು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರ ಗುಂಪು ಸೇರುವಿಕೆಗೆ ಅವಕಾಶ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮಾರ್ಚ್ 29ರಂದು ಪುರಸಭೆಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ ಈಗಾಗಲೇ ನಗರದಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ಕಾರಣ ಪ್ರತಿ ವರ್ಷದಂತೆ ಮಾರ್ಚ್ 28ರಂದು ನಡೆಯ ಬೇಕಿದ್ದ ಹೋಳಿ ಹಬ್ಬದ ಸಾರ್ವಜನಿಕ ಆಚರಣೆಯನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post