ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಗರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಮೈತ್ರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕೆ.ಎನ್. ಲಿಖಿತಗೆ ತೃತೀಯ ಸ್ಥಾನ ಸಂದಿದೆ.
ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಪದ ಕಂಠಪಾಠ ಸ್ಪರ್ಧೆಯಲ್ಲಿ ಲಿಖಿತ ಮೂರನೇ ಬಹುಮಾನ ಪಡೆದುಕೊಂಡಿದ್ದಾಳೆ.
ಈಕೆಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಪ್ರಾಭಾರಿ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















