ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ತಾಲೂಕಿನ ಗ್ರಾಮಾಂತರ ಭಾಗದ ಜನರ ಅನುಕೂಲಕ್ಕಾಗಿ ಕೆಎಸ್’ಆರ್’ಟಿಸಿಯ ನೂತನ ಐದು ಬಸ್’ಗಳಿಗೆ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ BJP State President B Y Vijayendra ಚಾಲನೆ ನೀಡಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ನೂತನ 5 ಬಸ್’ಗಳಿಗೆ ಅವರು ಚಾಲನೆ ನೀಡಿದೆ.
ಈ ವೇಳೆ ಮಾತನಾಡಿದ ಅವರು, ತಾಲೂಕಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಹಾಗೂ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಬಸ್ ಸಂಚಾರ ಆರಂಭಿಸಲಾಗಿದೆ ಎಂದರು.
ಶಿಕಾರಿಪುರ ತಾಲೂಕಿಗೆ 30 ಬಸ್ಸುಗಳನ್ನು ಕೇಳಲಾಗಿತ್ತು. ಅದರಲ್ಲಿ ಮೊದಲನೇ ಹಂತದಲ್ಲಿ ಬಿ.ಎಸ್. ಯಡಿಯೂರಪ್ಪನವರು ಜನ್ಮ ದಿನದಂದು 5 ಬಸ್ ಗಳು ಸಂಚರಿಸಲು ಅವಕಾಶ ಮಾಡಿಕೊಟ್ಟ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರಿಗೂ ಹಾಗೂ ಈ ಬಗ್ಗೆ ವಿಶೇಷ ಪ್ರಯತ್ನವಾಯಿಸಿದ ಸಂಸದರಾದ ಬಿ.ವೈ. ರಾಘವೇಂದ್ರ ಅವರಿಗೆ ಹಾಗೂ ಅಧಿಕಾರಿಗಳಿಗೆ ವಿಜಯೇಂದ್ರ ಅಭಿನಂದನೆ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post