ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಪಟ್ಟಣದ ಅರಸುನಗರದಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು House robbery case ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಕಳುವಾದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 4ರಂದು ಬೆಳಿಗ್ಗೆ 8.30ರಿಂದ ಸಂಜೆ 5.45ರ ನಡುವೆ, ಗೌರಮ್ಮ ಅವರ ಮನೆಯಲ್ಲಿ ಗಾಡ್ರೇಜ್ ಬೀರುವಿನಿಂದ28 ಗ್ರಾಂ ಬಂಗಾರದ ಆಭರಣಗಳು (₹3.14 ಲಕ್ಷ), 134 ಗ್ರಾಂ ಬೆಳ್ಳಿ ವಸ್ತುಗಳು (₹26,800), ₹2 ಲಕ್ಷ ನಗದು ಕಳ್ಳತನವಾಗಿತ್ತು. ಈ ಕುರಿತು ಜೂನ್ 5ರಂದು ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಶೇಷ ತಂಡದಿಂದ ಶೀಘ್ರ ಕಾರ್ಯಾಚರಣೆ
ಪೊಲೀಸ್ ಅಧೀಕ್ಷಕ ನಿಖಿಲ್ ಬಿ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಎಸ್‌ಪಿ ಎ.ಜಿ. ಕಾರಿಯಪ್ಪ ಮತ್ತು ಡಿಎಸ್‌ಪಿ ಕೇಶವ ಕೆ.ಇ ಅವರ ಮೇಲ್ವಿಚಾರಣೆಯಲ್ಲಿ, ಸಿಪಿಐ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಯಿತು.
Also read: ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ
ಆರೋಪಿ ಬಂಧನ, ಕಳುವಾದ ವಸ್ತುಗಳ ವಶ
ತನಿಖೆ ವೇಳೆ ಅಮಿತ್ (47) ಎಂಬ ಆರೋಪಿಯನ್ನು ಬಂಧಿಸಿ, ಕಳುವಾದ ಚಿನ್ನ, ಬೆಳ್ಳಿ ಹಾಗೂ ₹2 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಪ್ರಕರಣವನ್ನು ಶೀಘ್ರವಾಗಿ ಭೇದಿಸಿದ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















