ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮನೆಯಲ್ಲಿಯೇ ಅಕ್ರಮವಾಗಿ ಬಂದೂಕುಗಳನ್ನು ತಯಾರಿಸುತ್ತಿದ್ದ #Illegal gun manufacturing ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಲಕ್ಸ್ಮಣಪ್ಪ(67) ಎಂದು ಗುರುತಿಸಲಾಗಿದೆ.
ಆರೋಪಿ ತನ್ನ ಹಳೆಯ ಮನೆಯಲ್ಲಿ ಅಕ್ರಮವಾಗಿ 7 ನಾಡ ಬಂದೂಕು ತಯಾರಿಸಿ ಮಾರಾಟ ಮಾಡಲು ಇಟ್ಟುಕೊಂಡಿದ್ದ ಎಂದು ವರದಿಯಾಗಿದೆ.
ಬಂದೂಕು ಸಂಗ್ರಹಿಸಿಟ್ಟಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಪೊಲೀಸರು ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದರು. ಈ ವೇಳೆ ಬಂದೂಕುಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ದಾಳಿಯಲ್ಲಿ ಡಿಎಸ್ಪಿ ಕೇಶವ ಕೆ.ಇ , ಸಿಪಿಐ ಸಂತೋಷ್ ಎಂ.ಪಾಟೀಲ್, ಎಸ್’ಐ ಎಚ್.ಪಿ. ಶರತ್ ಹೆಚ್ ಪಿ., ಸಿಬ್ಬಂದಿ ಕೊಟ್ರೇಶಪ್ಪ, ಕೆ. ಪ್ರದೀಪ್, ನಾಗರಾಜ ಹಾಗೂ ರವಿ ನಾಯ್ಕ, ರವಿಕುಮಾರ್ ಭಾಗವ ಭಾಗಿಯಾಗಿದ್ದರು. ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















