ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್’ವೊಂದು Bus Accident ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಗರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.
ಅಪಘಾತದ ಹಿನ್ನೆಲೆ ನೋಡುವುದಾದರೆ, ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಬೈಕ್ ಸವಾರನೋರ್ವ ರಸ್ತೆಯಲ್ಲಿದ್ದ ಹಂಪ್ತಪ್ಪಿಸಲು ಆಗಿ ಬೈಕನ್ನು ಬಲಕ್ಕೆ ತಿರುಗಿಸಿದ್ದಾನೆ.
ಈ ಭೀಕರ ಅಪಘಾತದ ಪರಿಣಾಮವಾಗಿ ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಮತ್ತು ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಾಳುಗಳ ಪೈಕಿ ಪರಿಸ್ಥಿತಿ ಗಂಭೀರವಾಗಿದ್ದ 10 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Comments 1