ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು ತಮ್ಮ ಸಹೋದರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಅವರೊಂದಿಗೆ ಬಿರುಸಿನ ಪ್ರಚಾರ ನಡೆಸಿದರು.
ತಾಲೂಕಿನ ಕಾಗಿನಲ್ಲಿ ಶ್ರೀ ಮೂಕಾಂಬಿಕಾ ದೇವಸ್ಥಾನ ಮುಂಭಾಗದ ವೃತ್ತದ ಆವರಣದಲ್ಲಿ ಇಂದು ಹಮ್ಮಿಕೊಂಡಿದ್ದ ಕಾಗಿನಲ್ಲಿ, ಮಾರವಳ್ಳಿ, ಹೊಸೂರು, ಗೊಗ್ಗ, ಜಕ್ಕಿನಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಸಹೋದರರು ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಪ್ರಧಾನಿ ನರೇಂದ್ರ ಮೋದಿ #PM Narendra Modi ಸರ್ಕಾರ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ ಶೋಷಿತರ, ಬಡವರ, ದೀನ ದಲಿತರ, ಹಿಂದುಳಿದವರ, ಯುವಕರ, ಮಹಿಳೆಯರ, ರೈತರ, ಶ್ರಮಿಕರ, ಬೀದಿಬದಿ ವ್ಯಾಪಾರಸ್ಥರು ಸೇರಿದಂತೆ ಇನ್ನೂ ಅನೇಕ ವಲಯಗಳ ಅಭ್ಯುದಯಕ್ಕಾಗಿ ಕಾರ್ಯರೂಪಕ್ಕೆ ತಂದಿರುವ ಐತಿಹಾಸಿಕ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
Also read: ಶಿವಮೊಗ್ಗ | ನಿದಿಗೆ ಬಳಿ ಭೀಕರ ರಸ್ತೆ ಅಪಘಾತ | ವ್ಯಕ್ತಿ ದುರ್ಮರಣ | ಘಟನೆ ನಡೆದಿದ್ದು ಹೇಗೆ?
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಮುಂದಿನ ಮೂವತ್ತು ದಿನಗಳ ಕಾಲ ಕಾರ್ಯಕರ್ತರು ಕ್ಷೇತ್ರದಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡು ನಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಿ ಎಂದು ಕರೆ ನೀಡಿದರು.
ಕೇಂದ್ರ ಸರ್ಕಾರದ ಸಾಧನೆಗಳನ್ನು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿ ಮನೆಗೆ ಮುಟ್ಟಿಸಿ ಹೆಚ್ಚಿನ ಮತಗಳ ಅಂತರದಿAದ ಗೆಲ್ಲಿಸುವಂತೆ ಈ ಮೂಲಕ ಮೋದಿ ಅವರ ಕೈಯನ್ನು ಬಲಪಡಿಸಿ ಎಂದು ವಿನಂತಿಸಿದರು.
ಗುರುಮೂರ್ತಿ, ಹನುಮಂತಪ್ಪ, ಭೂಕಾಂತ್, ಗುರುರಾಜ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post