ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಇತ್ತೀಚಿನ ದಿನಗಳಲ್ಲಿ ರೈತರು ಸಾವಯವ ಉತ್ಪನ್ನಗಳ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ ಸಾವಯವ ಕೃಷಿ ಹೆಚ್ಚಿನ ಒಲವು ಪಡೆಯುತ್ತಿದೆ. ಸಾವಯವ ಕೃಷಿ ಹೆಚ್ಚುತ್ತಿದ್ದಂತೆ ಕೃಷಿಯಲ್ಲಿ ಸೂಕ್ಷ್ಮಾಣು ಜೀವಿಗಳ ಬಳಕೆ ಸಾಮಾನ್ಯವಾಗಿದೆ ಎಂದು ಕೃಷಿ ವಿವಿ ವಿದ್ಯಾರ್ಥಿಗಳು ರೈತರಿಗೆ ತಿಳಿಸಿಕೊಟ್ಟರು.
ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಬಿಎಸ್’ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಕೃಷಿಯಲ್ಲಿ ಸೂಕ್ಷ್ಮಾಣು ಜೀವಿಗಳ ಬಳಕೆ ಬಗ್ಗೆ ಗುಂಪು ಚರ್ಚೆಯನ್ನು ಚಿಕ್ಕಜೋಗಿಹಳ್ಳಿಯ ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಗುಂಪು ಚರ್ಚೆಯಲ್ಲಿ ಹಲವು ವಿಷಯಗಳನ್ನು ತಿಳಿಸಲಾಯಿತು.

ಗುಂಪು ಚರ್ಚೆಯಲ್ಲಿ ಕೃಷಿ ವಿದ್ಯಾರ್ಥಿಯಾದ ಪವನ್ ದಳವಾಯಿ ಸೂಕ್ಷ್ಮಾಣು ಜೀವಿಗಳ ಬಗ್ಗೆ ವಿವರಿಸಿದರು. ಸೂಕ್ಷ್ಮಾಣು ಜೀವಿಗಳಾದ ರೈಸೋಬಿಯಂ ಮೈಕೋರೈಜಾ, ಅಜಟೋಬ್ಯಾಕ್ಟರ್, ಅಜೋಸ್ಪಿರಿಲಂ, ಜೈವಿಕ ಕೀಟನಾಶಕವಾದ ಮೆಟರೈಜಿಯಂ, ಕಾಂಪೋಸ್ಟ್ ಕಲ್ಚರ್ ಮುಂತಾದ ಜೀವಿಗಳ ಪರಿಚಯ, ಉಪಯೋಗಗಳು, ಅದರ ಗುಣಲಕ್ಷಣಗಳ ಬಗ್ಗೆ ತಿಳಿಸಿಕೊಡಲಾಯಿತು.

ಗುಂಪು ಚರ್ಚೆಯಲ್ಲಿ ಭಾಗವಹಿಸಿದ ರೈತರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ರೈತ ಮುಖಂಡರು ಮುಂತಾದವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post