ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ತಾಲೂಕಿನ ರಾಘವೇಂದ್ರ ಬಡಾವಣೆಯಲ್ಲಿ ನಡೆದಿದೆ.
ರೇಣುಕಾ (40) ಕೊಲೆಯಾದ ಮಹಿಳೆ, ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿ ನಾಗರಾಜ್ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿ ಪತ್ನಿಯನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
Also read: ಶಿವಮೊಗ್ಗ | ಕ್ರೀಡೆಯಿಂದ ಶಿಸ್ತು, ಬುದ್ದಿಶಕ್ತಿ ಹೆಚ್ಚಾಗುತ್ತದೆ | ಸುನಿಲ್ ರೋಡ್ರಿಗಸ್
ಘಟನೆ ಹಿನ್ನೆಲೆ:
ನಿನ್ನೆ ತಡರಾತ್ರಿಯವರೆಗೂ ಗಂಡ, ಹೆಂಡತಿ ನಡುವೆ ಜಗಳ ನಡೆದಿದ್ದು, ನಸುಕಿನ ಜಾವ ಸುಮಾರು 4 ಗಂಟೆಯ ವೇಳೆ ಪತ್ನಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಕೊಲೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post