ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ ತಾಲೂಕಿನ ಸದಾಶಿವಪುರ ಗ್ರಾಮದ ಬಳಿ ಸೋಮವಾರ ತಡರಾತ್ರಿ ಮಹಿಳೆಯೋರ್ವಳ ಕೊಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ತಾಲೂಕಿನ ಹೊಸ ಗೊದ್ದನಕೊಪ್ಪ ಸಂದ್ಯಾ ಕೊಲೆಯಾದ ಮಹಿಳೆಯಾಗಿದ್ದು ಮೃತಳ ಪತಿ ಅರುಣ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ಕಳೆದ 9 ತಿಂಗಳ ಹಿಂದೆ ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ ಯುವತಿ ಸಂದ್ಯಾಳನ್ನು ಹೊಸಗೊದ್ದನಕೊಪ್ಪದ ನಿವಾಸಿ ಅರುಣ್ ಎರಡನೇ ವಿವಾಹವಾಗಿದ್ದ ಎನ್ನಲಾಗಿದ್ದು.
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ನಿರ್ಜನ ಪ್ರದೇಶಕ್ಕೆ ಸಂದ್ಯಾಳನ್ನು ಪತಿ ಅರುಣ್ ಸೋಮವಾರ ತಡರಾತ್ರಿ ಕರೆದುಕೊಂಡು ಹೋಗಿ ಕುತ್ತಿಗೆಗೆ ಚಾಕುವಿನಿಂದ ಕೊಯ್ದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಅರುಣ್‌ನನ್ನು (29) ಪೋಲಿಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post