ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ರಾಜ್ಯ ಸರ್ಕಾರ ಘೋಷಿಸಿರುವ ಮೀಸಲಾತಿ ಬದಲಾವಣೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಒಳ ಮೀಸಲಾಗಿ ಕುರಿತಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಕುರಿತಾಗಿ ಬಂಜಾರ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ರಾಜ್ಯ ಸರ್ಕಾರ ದೂರಿದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಬಿಎಸ್‌ವೈ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಟೈರ್ ಹಾಗೂ ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಸ್‌ವೈ ನಿವಾಸ ಹಾಗೂ ಈ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Also read: ಕುಟುಂಬದವರಿಂದಲೇ ನರಬಲಿಗೆ ತುತ್ತಾದ ಬಾಲಕ: ಘಟನೆಯ ವಿವರ ಇಲ್ಲಿದೆ












Discussion about this post