ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ವಿವಿಧತೆಯಲ್ಲಿ ಏಕತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದ ಮಹಾತ್ಮ ಗಾಂಧೀಜಿ ಅವರು ಜಾತೀಯತೆ ಹಾಗೂ ಅಸ್ಪೃಶ್ಯತೆ ನಿವಾರಣೆಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಶಾಲಾ ಪ್ರಾಚಾರ್ಯ ಪಿ. ವಿಶ್ವನಾಥ ತಿಳಿಸಿದರು.
ನಗರದ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಲ್ಲಿ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಸತ್ಯ ಮತ್ತು ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕ ಗಾಂಧೀಜಿ ಅವರ ತತ್ವಗಳು ಎಲ್ಲೆಡೆ ಹರಡಲಿ; ವಿದ್ಯಾರ್ಥಿಗಳು ಗಾಂಧೀಜಿ ಅವರ ಸತ್ಯ, ಸಿದ್ಧಾಂತ, ತತ್ವಗಳ, ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿ ಅವರು ಸಮಾನತೆ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ಅಹಿಂಸಾ ತತ್ವದ ಮಹತ್ವದ ಬಗ್ಗೆ ಜಗತ್ತಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಅವರು ವಿಚಾರಧಾರೆಗಳೂ ಇಂದಿಗೂ ಪ್ರಸ್ತುತವಾಗಿವೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಜೈ ಜವಾನ್ ಜೈ ಕಿಸಾನ್ ಘೋಷಣೆಯನ್ನು ಪ್ರಕಟಿಸುವ ಮೂಲಕ ದೇಶದ ಸೇನೆ ಹಾಗೂ ಕೃಷಿ ಕ್ಷೇತ್ರದ ಮಹತ್ವ ಸಾರಿದ್ದರು ಎಂದು ತಿಳಿಸಿದರು.
Also read: ಗಾಂಧಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಾವಿತ್ರಿ ಮನೋಹರ್
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಕು.ರೇಖಾ, ಚಂದ್ರಮತಿ, ನಂದಿನಿ ಮತ್ತು ಕು. ಪ್ರಿಯದರ್ಶಿನಿ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಬಗ್ಗೆ ಮಾತನಾಡಿದರು.
ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ , ಶಾಲಾ ಶಿಕ್ಷಕರು ಮತ್ತು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ಕು.ವಿನೋದ ಮತ್ತು ತಂಡದವರು ಪ್ರಾರ್ಥಿಸಿ,ಕು.ಪ್ರೀಯದರ್ಶಿನಿ,ಕು.ಗೌರಿ ವಂದಿಸಿ ಮತ್ತು ಕು.ಪ್ರೀತಿ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post