ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮಳೆ ಹಾನಿಯಿಂದ ವಸತಿ ಪ್ರದೇಶಗಳಿಗೆ ಉಂಟಾಗಿರುವ ನಷ್ಟದ ಕುರಿತು ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಹಾಗೂ ಮುಂಗಾರು ಹತ್ತಿರವಿದ್ದು ಮಳೆಯ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕ ಬಿ.ವೈ. ವಿಜಯೇಂದ್ರ MLA Vijayendra ಅಧಿಕಾರಿಗಳಿಗೆ ಸೂಚಿಸಿದರು.
ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿ, ರೈತರಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಪೂರೈಕೆ ಸಂಬಂಧಿಸಿದಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ಹಾಗೂ ಕ್ಷೇತ್ರದ ವಿವಿಧ ಇಲಾಖೆಗಳ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Also read: ಚಂದ್ರಗುತ್ತಿ ಸುತ್ತಮುತ್ತ ಬಿರುಸಿನ ಗಾಳಿ ಮಳೆ: ವಿದ್ಯುತ್ ಕಂಬ ಬಿದ್ದು ಸಂಚಾರ ಅಸ್ತವ್ಯಸ್ತ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post