ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದ ಶಿಕ್ಷಕನನ್ನು ಧನಂಜಯ್(51) ಎಂದು ಗುರುತಿಸಲಾಗಿದೆ.
ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿದ ಸಂದರ್ಭದಲ್ಲಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ ಸಂದರ್ಭದಲ್ಲಿ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಿ ತಾನು ತರಗತಿ ಕೊಠಡಿ ಕಿಟಕಿ ಹಾಕಿ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮೂಲತಃ ಹೊನ್ನಾಳಿ ತಾಲೂಕಿನ ಜೀನಳ್ಳಿ ಗ್ರಾಮದ ನಿವಾಸಿಯಾಗಿದ್ದ, ಶಿಕ್ಷಕ ಧನಂಜಯ್ ಹೊನ್ನಾಳಿಯಲ್ಲಿ ವಾಸವಿದ್ದರು. ಬಿಎಲ್’ಒ ಕೆಲಸದ ಒತ್ತಡದಿಂದ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪತ್ನಿ ಆಶಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


