No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ರೈತರಿಗೆ ತಂತ್ರಜ್ಞಾನದ ಬೆಳಕನ್ನು ಚೆಲ್ಲುವಲ್ಲಿ ಕೃಷಿ ವಿದ್ಯಾರ್ಥಿಗಳ ಪ್ರಯತ್ನ ಶ್ಲಾಘನೀಯ

“ಕೃಷಿ ವಸ್ತು ಪ್ರದರ್ಶನ – 2025” ಕಾರ್ಯಕ್ರಮಕ್ಕೆ ಶಾಸಕ ಬಿ.ವೈ. ವಿಜಯೇಂದ್ರ ಚಾಲನೆ

kalpa News by kalpa News
December 24, 2025
in ಶಿಕಾರಿಪುರ
0
ರೈತರಿಗೆ ತಂತ್ರಜ್ಞಾನದ ಬೆಳಕನ್ನು ಚೆಲ್ಲುವಲ್ಲಿ ಕೃಷಿ ವಿದ್ಯಾರ್ಥಿಗಳ ಪ್ರಯತ್ನ ಶ್ಲಾಘನೀಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಂಕಷ್ಟಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ವಿವಿ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಕೃಷಿ ವಿವಿ ಸ್ಥಾಪನೆಯ ಉದ್ದೇಶ ಸಾರ್ಥಕವಾಗುತ್ತದೆ ಎಂದು ಶಾಸಕ  ಬಿ.ವೈ. ವಿಜಯೇಂದ್ರ #MLA Vijayendra ಅಭಿಪ್ರಾಯಪಟ್ಟರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, #Keladi Shivappanayaka VV ಶಿವಮೊಗ್ಗ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ, ಇರುವಕ್ಕಿ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ಅಂಗವಾಗಿ ಚುರ್ಚಿಗುಂಡಿ ಗ್ರಾಮದಲ್ಲಿ “ಕೃಷಿ ವಸ್ತು ಪ್ರದರ್ಶನ–2025” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರಿಗೆ ತಂತ್ರಜ್ಞಾನದ ಬೆಳಕನ್ನು ಚೆಲ್ಲುವಲ್ಲಿ ಕೃಷಿ ವಿದ್ಯಾರ್ಥಿಗಳು ವಹಿಸುತ್ತಿರುವ ಪಾತ್ರ ಶ್ಲಾಘನೀಯವಾಗಿದ್ದು, ಅವರ ಸೇವಾಭಾವ ಹಾಗೂ ಪರಿಶ್ರಮಕ್ಕೆ ಪ್ರೋತ್ಸಾಹ ನೀಡಿದರು.

ಕೃಷಿ ವಿವಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಜಿಲ್ಲೆಯ ಪ್ರತಿಯೊಂದು ಹಳ್ಳಿಗೆ ತೆರಳಿ, ರೈತರ ನೈಜ ಪರಿಸ್ಥಿತಿಯನ್ನು ಅಧ್ಯಯನ ಮಾಡಿ, ಪ್ರಾಯೋಗಿಕ ಪರಿಹಾರಗಳನ್ನು ನೀಡುವ ಕೆಲಸ ಮಾಡಬೇಕು. ಇದರಿಂದ ವಿದ್ಯಾರ್ಥಿಗಳಿಗೂ ರೈತರಿಗೂ ಭವಿಷ್ಯ ಉಜ್ವಲವಾಗುತ್ತದೆ ಎಂದು  ಹೇಳಿದರು.

ಕೃಷಿಕ ಸಮಾಜದ ರಾಜ್ಯ ಘಟಕ ಅಧ್ಯಕ್ಷರಾದ ನಗರದ ಮಹದೇವಪ್ಪ ಮಾತನಾಡಿ, ಈ ಕೃಷಿ ವಸ್ತು ಪ್ರದರ್ಶನವು ಕೇವಲ ವಿದ್ಯಾರ್ಥಿಗಳ ಕಾರ್ಯಕ್ರಮವಲ್ಲ, ಇದು ನೇರವಾಗಿ ರೈತರಿಗೆ ಸಂಬಂಧಿಸಿದ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟರು.

ಬೀಜೋಪಚಾರ, ಬೀಜಗಳ ಸ್ವಾವಲಂಬನೆ, ಸಾವಯವ ಕೃಷಿ ಪದ್ಧತಿಗಳ ಅಳವಡಿಕೆ, ರಸಗೊಬ್ಬರಗಳ ಗುಣಮಟ್ಟವನ್ನು ಗುರುತಿಸುವ ವಿಧಾನಗಳ ಕುರಿತು ರೈತರು ಜಾಗೃತರಾಗಬೇಕು ಎಂದು ಸಲಹೆ ನೀಡಿದರು. ಅಲ್ಲದೆ, ರೈತರು ಸಂಘಟಿತರಾಗಿ ತಮ್ಮ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಂಡುಕೊಳ್ಳುವತ್ತ ಪ್ರಯತ್ನಿಸಬೇಕು. ಈ ಮೂಲಕ ರೈತರು ಸ್ವತಃ ವಿಜ್ಞಾನಿಗಳಾಗಿ ರೂಪುಗೊಳ್ಳುವಂತಾಗಬೇಕು ಎಂದು ಅವರು ಕರೆ ನೀಡಿದರು.

ಕೃಷಿ ವಿವಿ ಕುಲಪತಿ ಡಾ. ಆರ್.ಸಿ. ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳ ಕೃಷಿ ಕಾರ್ಯಾನುಭವದ ಅಂಗವಾಗಿ ಆಯೋಜಿಸಿರುವ ಈ ಕೃಷಿ ವಸ್ತು ಪ್ರದರ್ಶನ ಅತ್ಯಂತ ಶ್ಲಾಘನೀಯವಾಗಿದ್ದು, ರೈತರ ಭಾರೀ ಪಾಲ್ಗೊಳ್ಳುವಿಕೆಯೇ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದು  ಹೇಳಿದರು.

ವಿದ್ಯಾರ್ಥಿಗಳು ನೇರವಾಗಿ ರೈತರ ಜಮೀನಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಪ್ರಾತ್ಯಕ್ಷಿಕೆಗಳ ಮೂಲಕ ಪರಿಹಾರ ಮಾರ್ಗಗಳನ್ನು ಸೂಚಿಸಿರುವುದು ಅತ್ಯಂತ ಮೆಚ್ಚುಗೆಯಾಗಿದೆ ಎಂದು ಅವರು ತಿಳಿಸಿದರು.
ಮುಂದಿನ ದಿನಗಳಲ್ಲಿ ರೈತರ ಅಭಿವೃದ್ಧಿಗಾಗಿ ಇನ್ನಷ್ಟು ಶ್ರಮವಹಿಸಿ, ರೈತರ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸುವ ಹೊಣೆಗಾರಿಕೆಯನ್ನು ಕೃಷಿ ವಿವಿ ವಹಿಸಿಕೊಳ್ಳಲಿದೆ ಎಂಬ ಭರವಸೆಯನ್ನು ಅವರು ನೀಡಿದರು.

ಕಾರ್ಯಕ್ರಮದಲ್ಲಿ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿ, ಅವಧಿಯಲ್ಲಿ ಗ್ರಾಮಗಳಲ್ಲಿ ನಡೆಸಿದ ಕಾರ್ಯಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಅನುಭವಗಳನ್ನು ಕೇಳಿದರು. ವಿದ್ಯಾರ್ಥಿಗಳು ರೈತರ ಹೊಲಗಳಲ್ಲಿ ನಡೆಸಿದ ಪ್ರಾತ್ಯಕ್ಷಿಕೆಗಳು, ಗುಂಪುಚರ್ಚೆಗಳು ಹಾಗೂ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ತಿಳಿದು ಸಂತಸ ವ್ಯಕ್ತಪಡಿಸಿದ ಅವರು, ವಿದ್ಯಾರ್ಥಿಗಳು ಪರಿಚಯಿಸಿರುವ ನವೀನ ಕೃಷಿ ತಂತ್ರಜ್ಞಾನಗಳನ್ನು ರೈತರು ಅಳವಡಿಸಿಕೊಂಡಾಗ ಮಾತ್ರ ಈ ರೀತಿಯ ಕಾರ್ಯಕ್ರಮಗಳ ಸಾರ್ಥಕತೆ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ವಿವಿ ಶಿಕ್ಷಣ ನಿರ್ದೇಶಕರಾದ ಡಾ. ಬಿ ಹೇಮ್ಲಾ ನಾಯಕ್ ಅವರು ಮಾತನಾಡಿ, ದೇಶ ಸೇವೆಗಾಗಿ ಸೈನಿಕರು ಇದ್ದಂತೆ ರೈತರ ಸೇವೆಗಾಗಿ ಕೃಷಿ ವಿದ್ಯಾರ್ಥಿಗಳು ಎಂದರು.

ಚುರ್ಚಿಗುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ರಾಘವೇಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಸಮಾಜ ತಾಲ್ಲೂಕು ಘಟಕದ ಅಧ್ಯಕ್ಷ ಹುಲ್ಮಾರ್ ಮಹೇಶ್, ಸಹಾಯಕ ಕೃಷಿ ನಿರ್ದೇಶಕ ಕಿರಣ್ ಕುಮಾರ್ ಹರ್ತಿ, ರುದ್ರೇಗೌಡ, ಸುರೇಶ ಗುಡ್ಡಳ್ಳಿ, ಬಿ.ಎಮ್ ಪಾಲಕ್ಶಪ್ಪ, ಎಸ್‌ಟಿ ವೀರೇಶ್ ,ಎಸ್ ಶಶಿಧರ್, ಪರಮೇಶ್ವರಪ್ಪ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದ ಅಂತಿಮ ವರ್ಷದ ಬಿ.ಎಸ್‌ಸಿ (ಕೃಷಿ) ವಿದ್ಯಾರ್ಥಿಗಳನ್ನು ಗ್ರಾಮೀಣ ಕೃಷಿ ಕಾರ್ಯಾನುಭವ ಯೋಜನೆಯಡಿ ಶಿಕಾರಿಪುರ ತಾಲೂಕಿನ ಕಲ್ಮನೆ, ಚುರ್ಚಿಗುಂಡಿ, ಹಿತ್ತಲ, ಈಸೂರು ಹಾಗೂ ಚಿಕ್ಕಜೋಗಿಹಳ್ಳಿ ಎಂಬ ಐದು ಗ್ರಾಮಗಳಿಗೆ ಮೂರು ತಿಂಗಳ ಕಾಲ ಶಿಬಿರವನ್ನು ನಿಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಈ ಅವಧಿಯಲ್ಲಿ ಗ್ರಾಮಗಳಲ್ಲಿ ವಾಸ್ತವ್ಯ ಮಾಡಿ ರೈತರೊಂದಿಗೆ ನೇರ ಸಂವಹನ ನಡೆಸಿ ಸುಮಾರು 160ಕ್ಕು ಹೆಚ್ಚು ಗುಂಪುಚರ್ಚೆ, ಪ್ರಾತ್ಯಕ್ಷಿಕೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದ್ದು, ಪ್ರತಿ ಹಳ್ಳಿಯಲ್ಲೂ ಕೃಷಿ ಮಾಹಿತಿ ಕೇಂದ್ರ ಹಾಗೂ ಬೆಳೆ ಸಂಗ್ರಹಾಲಯವನ್ನು ನಿರ್ಮಿಸಿದ್ದರು, ಹಾಗೂ ರೈತರ ತೋಟಗಳನ್ನು ಪರಿಶೀಲಿಸಿ ಸರಿಯಾದ ಮಾಹಿತಿಯನ್ನು ಕೂಡ ಹಂಚಿದ್ದರು. ಈ ಕಾರ್ಯಾನುಭವದ ಸಮಾಪ್ತಿಯಾಗಿ, ಐದು ಗ್ರಾಮಗಳಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಕೃಷಿ ವಿದ್ಯಾರ್ಥಿಗಳು ಒಗ್ಗೂಡಿ ಚರ್ಚಿಗುಂಡಿ ಗ್ರಾಮದಲ್ಲಿ ಕೃಷಿ ವಸ್ತು ಪ್ರದರ್ಶನವನ್ನು ಯಶಸ್ವಿಯಾಗಿ ಆಯೋಜಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಕಾರ್ಯಕ್ರಮಕ್ಕೆ ಮುನ್ನ ಆಗಮಿಸಿದ ಅತಿಥಿಗಳಿಗೆ ಪೂರ್ಣಕುಂಭ ಸ್ವಾಗತದೊಂದಿಗೆ ಗೌರವ ಸಲ್ಲಿಸಲಾಯಿತು. ಈ ಮಹತ್ವದ ಕೃಷಿ ವಸ್ತು ಪ್ರದರ್ಶನದಲ್ಲಿ 90ಕ್ಕೂ ಹೆಚ್ಚು ಕೃಷಿ ಮಳಿಗೆಗಳು ಸ್ಥಾಪನೆಯಾಗಿದ್ದವು, ಪ್ರದರ್ಶನದ ವಿಶೇಷ ಆಕರ್ಷಣೆಯಾಗಿ ವಿದ್ಯಾರ್ಥಿಗಳು ಸ್ವತಃ ನಿರ್ಮಿಸಿರುವ ತಾಂತ್ರಿಕ ಮಳಿಗೆಗಳು ಎಲ್ಲರ ಗಮನ ಸೆಳೆದವು. ಈ ಮಳಿಗೆಗಳಲ್ಲಿ ಭತ್ತದ ನವೀನ ತಂತ್ರಜ್ಞಾನಗಳ ಮಾಹಿತಿ, ಜೈವಿಕ ಗೊಬ್ಬರಗಳ ಉಪಯೋಗ, ಅಡಿಕೆ ಬೆಳೆಯ ವೈಜ್ಞಾನಿಕ ನಿರ್ವಹಣೆ, ಸಮಗ್ರ ಕೀಟ ಹಾಗೂ ರೋಗ ನಿರ್ವಹಣೆ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಮೆಕ್ಕೆಜೋಳ ಬೆಳೆಯ ಆಧುನಿಕ ತಂತ್ರಜ್ಞಾನ, ಸಾವಯುವ ಕೃಷಿ ಪದ್ಧತಿಗಳು, ಬಾಳೆ ಬೆಳೆಯ ಸುಧಾರಿತ ವಿಧಾನಗಳು, ಸಮಗ್ರ ಕೃಷಿ ಪದ್ಧತಿ, ಹೈನುಗಾರಿಕೆ ಮೊದಲಾದ ವಿಷಯಗಳ ಕುರಿತು ರೈತರಿಗೆ ನೇರ ಮಾಹಿತಿ ಹಾಗೂ ಪ್ರಾಯೋಗಿಕ ವಿಧಾನಗಳ ವಿವರಗಳನ್ನು ನೀಡಲಾಯಿತು.

ಅಲಂಕೃತ ಹೋರಿಗಳು ಸಾರ್ವಜನಿಕರ ಗಮನ ಸೆಳೆದವು. ಮಾರಾಟ ಮಳಿಗೆಗಳನ್ನು ಅತಿಥಿಗಳು ವೀಕ್ಷಿಸಿದರು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ರೈತರು ವಸ್ತು ಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿ ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                      

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKeladi Shivappanayaka VVLatestNewsKannadaLocalNewsMalnadNewsMLA VijayendraNews in KannadaNews KannadaShikaripuraShimogaShivamoggaNewsಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಾಸಕ ಬಿ.ವೈ. ವಿಜಯೇಂದ್ರಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಮಟ್ಟದ ಭಾವಗೀತೆ ಸ್ಪರ್ಧೆ | ಅಪ್ರಮೇಯ ಪ್ರಥಮ | ಮೈಸೂರಿಗೆ ಹಲವು ಬಹುಮಾನ

Next Post

ಕಲೆಯಿಂದ ಮಾತ್ರ ವಿಶ್ವಮೈತ್ರಿ, ಸಮನ್ವಯ ಸಾಧ್ಯ | ಕಲಾವಿದೆ ಪೂರ್ಣಿಮಾ ಗುರುರಾಜ ಅಭಿಮತ

kalpa News

kalpa News

Next Post
ಕಲೆಯಿಂದ ಮಾತ್ರ ವಿಶ್ವಮೈತ್ರಿ, ಸಮನ್ವಯ ಸಾಧ್ಯ | ಕಲಾವಿದೆ ಪೂರ್ಣಿಮಾ ಗುರುರಾಜ ಅಭಿಮತ

ಕಲೆಯಿಂದ ಮಾತ್ರ ವಿಶ್ವಮೈತ್ರಿ, ಸಮನ್ವಯ ಸಾಧ್ಯ | ಕಲಾವಿದೆ ಪೂರ್ಣಿಮಾ ಗುರುರಾಜ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL