ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳ #Election ಪ್ರಾಮುಖ್ಯತೆ ಪ್ರಮುಖವಾದದ್ದು, ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣಾ ಪ್ರಕ್ರಿಯೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿಯಾದ ಡಾ. ಶಿವಕುಮಾರ್ ಅಭಿಮತ ವ್ಯಕ್ತಪಡಿಸಿದರು.
ಇಂದಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಘದ ಮುಖಾಂತರ ನಮ್ಮ ದೇಶದ ಚುನಾವಣಾ ವ್ಯವಸ್ಥೆಯಂತೆ ವಿದ್ಯಾರ್ಥಿ ಸಂಘದ ಚುನಾವಣೆ ಮಾಡುವುದರ ಮುಖಾಂತರ ವಿದ್ಯಾರ್ಥಿಗಳಲ್ಲಿ ಚುನಾವಣೆಯ ಬಗ್ಗೆ ಮಾಹಿತಿ ತಿಳಿಯುತ್ತದೆ. ವ್ಯವಸ್ಥೆಯಲ್ಲಿ ಚುನಾವಣೆಗಳು ಪಾರದರ್ಶಕವಾಗಿರಬೇಕು ಹಾಗೂ ನ್ಯಾಯ ಸಮಿತವಾಗಿದ್ದಾಗ ಒಳ್ಳೆಯ ವ್ಯಕ್ತಿಯ ಆಯ್ಕೆ ಆಗುತ್ತದೆ ಎಂದು ಚುನಾವಣೆಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು,
ಕುಮದ್ವತಿ ಕೇಂದ್ರೀಯ ವಸತಿ ಶಾಲೆ ಶಿಕಾರಿಪುರದಲ್ಲಿ ಪ್ರಜಾಪ್ರಭುತ್ವ ಮಾದರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಚುನಾವಣೆ ನಡೆಸಲಾಯಿತು. ಸಂವಿಧಾನ ಬದ್ದ ಚುನಾವಣಾ ನಿಯಮಗಳಂತೆ ಚುನಾವಣಾ ಸ್ಪರ್ಧಿಗಳಿಂದ ನಾಮಪತ್ರ ಸಲ್ಲಿಕೆ, ಪರಿಶೀಲನೆ, ಚುನಾವಣಾ ಪ್ರಚಾರ, ಹಾಗೂ ಮೊಬೈಲ್ ನ ಇ ವಿ ಎಂ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಇ ಮೂಲಕ ಮಕ್ಕಳಲ್ಲಿ ಚುನಾವಣೆ ಕುರಿತ ಜಾಗೃತಿ ಮೂಡಿಸಲಾಯಿತು. ಮತದಾನದಲ್ಲಿ 5 ರಿಂದ 10ನೇ ತರಗತಿ ವಿದ್ಯಾರ್ಥಿಗಳು, ಶಿಕ್ಷಕರು, ಬೋಧಕೇತರ ವರ್ಗದ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಚುನಾವಣಾ ವೀಕ್ಷಕರಾಗಿ ಆಡಳಿತ ಮಂಡಳಿ ಪ್ರತಿನಿಧಿ ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶಿವಕುಮಾರ್ ಜಿ. ಎಸ್, ಚುನಾವಣಾ ಆಯುಕ್ತರಾಗಿ ಶಾಲೆಯ ಪ್ರಾಚಾರ್ಯರಾದ ಸಿದ್ದೇಶ್ವರ್, ಉಪ ಚುನಾವಣಾ ಆಯುಕ್ತರಾಗಿ ಉಪಪ್ರಾಚಾರ್ಯ ಪ್ರಶಾಂತ್, ಹಾಗೂ ಶಿಕ್ಷಕರು ಕಾರ್ಯನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post