ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಕೊರೋನಾ ವಾರಿಯರ್‍ಸ್‌ಗಳಾಗಿ ಹಗಲು-ರಾತ್ರಿ ಕರ್ತವ್ಯ ನಿರ್ವಹಿಸುತ್ತಿರುವ ಪುರಸಭೆಯ ಸಿಬ್ಬಂದಿಗಳಿಗೆ ಇಂದು ಉಳ್ಳಿಫೌಂಡೇಶನ್ ವತಿಯಿಂದ ಮದ್ಯಾಹ್ನದ ಊಟವನ್ನು ನೀಡಲಾಯಿತು.
ಫೌಂಡೇಶನ್‌ನ ಅಧ್ಯಕ್ಷ ಉಳ್ಳಿದರ್ಶನ್ ಮಾತನಾಡಿ, ಪುರಸಭೆಯ ಸಿಬ್ಬಂದಿಗಳು ಹಗಲು-ರಾತ್ರಿ ಎನ್ನದೆ ಮಹಾಮಾರಿ ಕೊರೋನಾ ವಿರುದ್ಧ ಹೋರಾಡುತ್ತಿದ್ದು, ಅವರ ಕಾರ್ಯ ಶ್ಲಾಘನೀಯ ಎಂದರು.
ಪುರಸಭೆಯ ಸಿಬ್ಬಂದಿಗಳು ಸೋಂಕಿತರ ಮನೆಗಳಿಗೆ ತೆರಳಿ ಅವರಿಗೆ ಆತ್ಮಸ್ಥೈರ್ಯ ತುಂಬಿ, ಅವರ ಮನೆಗಳನ್ನು ಸ್ಯಾನಿಟೈಸ್ ಮಾಡಿಸುವುದರ ಜೊತೆಗೆ, ಪ್ರತಿ ವಾರ್ಡ್‌ಗಳಿಗೂ ಭೇಟಿ ನೀಡಿ ಟಾಸ್ಕ್ ಫೋರ್ಸ್ ಸಭೆ ನಡೆಸಿ, ಕೊರೋನಾ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ. ಪಟ್ಟಣದ ಸ್ವಚ್ಚತೆ ಕಾಪಾಡುವುದರಲ್ಲಿ ಪುರಸಭೆಯವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸದಸ್ಯರಾದ ರೇಣುಕಯ್ಯ, ಸುರೇಶ್ ದಾರವಾಡ, ಮುಖ್ಯಾಧಿಕಾರಿಗಳಾದ ಸುರೇಶ್, ರಾಜಕುಮಾರ್, ಪರಶುರಾಮ್, ಲೋಕೇಶ್, ಶಿವರಾಜ್, ರಂಜಿತ್, ಪ್ರವೀಣ್, ಪುರಸಭೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post