ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಜ.21ರ ನಿನ್ನೆ ಶಾಲೆಗೆ ಹೋಗುತ್ತೇವೆ ಎಂದು ಮನೆಯಿಂದ ತೆರಳಿದ್ದ ಮೂವರು ಬಾಲಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಭದ್ರಾಪುರದ ಬಳಿಯಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮೂವರು ಬಾಲಕರು ನಿನ್ನೆಯಿಂದ ನಾಪತ್ತೆಯಾಗಿದ್ದು, ಈ ಕುರಿತಂತೆ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕಾರಿಪುರ ತಾಲೂಕು, ಪುನೇದಹಳ್ಳಿ ವಾಸಿ ಹೇಮರಾಜ್ ಎಂಬುವವರ ಮಕ್ಕಳಾದ ಲಿಖಿತ್(13) ಹಾಗೂ ಪ್ರಥಮ್(12) ಎಂಬ ಇಬ್ಬರು ಬಾಲಕರು ಹಾಗೂ ಪುನೇದಹಳ್ಳಿ ವಾಸಿ ಪೆದ್ದಪ್ಪ ಎಂಬುವವರ ಮಗ ಅಂಬಾರಗೊಪ್ಪ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂದೀಪ್(15) ಎಂಬ ಬಾಲಕರು ಜ.21 ರಂದು ರಂದು ಬೆಳಿಗ್ಗೆ 9 ಗಂಟೆಗೆ ಶಾಲೆಗೆ ಹೋಗುತ್ತೇವೆಂದು ಮನೆಯಿಂದ ಹೋಗಿದ್ದು ಈವರೆಗೂ ವಾಪಾಸ್ಸಾಗಿಲ್ಲ.
ಲಿಖಿತ್ ವಿವರ: 5.2 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಸ್ಕೂಲ್ ಯೂನಿಫಾರಂ ಹಳದಿ ಬಣ್ಣದ ಟೀಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.
ಪ್ರಥಮ್ ವಿವರ: 5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಸ್ಕೂಲ್ ಯೂನಿಫಾರಂ ಹಳದಿ ಬಣ್ಣದ ಟೀಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.
ಸಂದೀಪ್ ವಿವರ: 5.2 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಸ್ಕೂಲ್ ಯೂನಿಫಾರಂ ಕೇಸರಿ ಬಣ್ಣದ ಟೀಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಮೂರು ಜನರು ಸ್ಕೂಲ್ ಬ್ಯಾಗ್ ತೆಗೆದುಕೊಂಡು ಹೋಗಿದ್ದಾರೆ.
ಈ ಮೂರು ಬಾಲಕರ ಬಗ್ಗೆ ಸುಳಿವು ದೊರೆತಲ್ಲಿ ಜಿಲ್ಲಾ ಪೊಲೀಸ್ ಕಚೇರಿ, ಸಂಖ್ಯೆ 08182- 261413, ಶಿಕಾರಿಪುರ ಡಿಎಸ್’ಪಿ 08187-222443, 9480803323, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ಪಿಐ 08187-222443, 9480803366 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















