ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ತಮ್ಮನ್ನು ಪ್ರೋತ್ಸಾಹಿಸಲು ಇಷ್ಟು ದೊಡ್ಡ ಮಟ್ಟದಲ್ಲಿ ಜನ ಬೆಂಬಲ ನೀಡುತ್ತಿರುವುದು ತಮಗೆ ತುಂಬ ಸಂತಸ ತಂದಿದೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದರು.
ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ತಾಯಂದಿರ ಆಶೀರ್ವಾದದಿಂದ ತಾನು ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸವಿದೆ. ತಾಲೂಕಿನ ಮತದಾರರು ತಂದೆ ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರ ಕಾರ್ಯವೈಖರಿಯನ್ನು ಮೆಚ್ಚಿ ತಮಗೂ ಅಭೂತ ಪೂರ್ವ ಗೆಲುವು ನೀಡಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.
ಶಿಕಾರಿಪುರ ಸೇರಿದಂತೆ ರಾಜ್ಯದೆಲ್ಲೆಡೆ ಜಯ ಗಳಿಸಿ ಸಂಪೂರ್ಣ ಬಹುಮತದೊಂದಿಗೆ ಮತ್ತೊಮೆಮ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಮುಂದಿನ ದಿನಗಳಲ್ಲಿ ರಾಜ್ಯದೆಲ್ಲೆಡೆ ಸಂಚರಿಸಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದೇನೆ. ಬಿಜೆಪಿ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.
ಅಂಬಾಸಿಡರ್ ಕಾರಿನಲ್ಲಿ ಆಗಮಿಸಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇದೇ ಅಂಬಾಸಿಡರ್‌ನಲ್ಲಿ ತಮ್ಮ ತಂಡೆ ಯಡಿಯೂರಪ್ಪ ಅವರು ರಾಜಕೀಯ ಜೀವನ ಆರಂಭಿಸಿದ್ದು, ಇದನ್ನು ನೋಡಿದಾಕ್ಷಣ ಕಾರ್ಯಕರ್ತರ ಮೈ ರೋಮಾಂಚನಗೊಳ್ಳುತ್ತದೆ. ಇದರೊಂದಿ ಭಾವನಾತ್ಮಕ ಸಂಬಂಧ ಹೊಂದಿದ್ದು, ಇದರಿಂದಲ್ಲೇ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ್ದೇನೆ ಎಂದರು.
ಶೀಘ್ರದಲ್ಲೇ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















