ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ವಿಧಾನಸಭಾ ಚುನಾವಣೆಗೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ B Y Vijayendra ಅವರು ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಎ.19ರಂದು ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಇಂದು ದಿನ ಉತ್ತಮವಾಗಿರುವ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಎ.19ರಂದ ಬುಧವಾರ ಭವ್ಯ ಮೆರವಣಿಗೆ ಮೂಲಕ ಪ್ರಚಾರ, ಬಹಿರಂಗ ಸಭೆ ಮೂಲಕ ಅದ್ದೂರಿಯಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ.
Also read: ತನ್ನನ್ನು ಹೆತ್ತ ತಾಯಿ, ತಾನು ಹೆತ್ತ ಮಗನನ್ನೇ ಕೊಚ್ಚಿ ಕೊಂದ ವ್ಯಕ್ತಿ: ಕಾರಣವೇನು?
ಅಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ, ಶಿಕಾರಿಪುರ ಚುನಾವಣಾ ಪ್ರಭಾರಿ ಎಸ್. ರುದ್ರೇಗೌಡ ಸೇರಿದಂತೆ ಪಕ್ಷದ ಪ್ರಮುಖರು ಅಂದು ಪಾಲ್ಗೊಳ್ಳಲಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















