ಕಲ್ಪ ಮೀಡಿಯಾ ಹೌಸ್
ಶಿಲ್ಲಾಂಗ್ : ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರ ನಿವಾಸದ ಮೇಲೆ ಭಾನುವಾರ ರಾತ್ರಿ 10:15ರ ಸುಮಾರಿಗೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದ್ದು, ಪೊಲೀಸ್ ಇಲಾಖೆ ಶಿಲ್ಲಾಂಗ್‌ನಲ್ಲಿ ಕರ್ಫ್ಯೂ ವಿಧಿಸಿ, ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಆರಂಭದಲ್ಲಿ ಮುಖ್ಯಮಂತ್ರಿ ಅವರ ನಿವಾಸದ ಮುಂಭಾಗದಲ್ಲಿ ದುಷ್ಕರ್ಮಿಗಳು ಬಾಟಲಿ ಎಸೆಯುತ್ತಿದ್ದಂತೆಯೇ ಬೆಂಕಿಯನ್ನು ನಂದಿಸಲಾಗಿತ್ತು. ಆದರೆ ನಂತರದಲ್ಲಿ ಮನೆಯ ಹಿಂಭಾಗದಲ್ಲಿಯೂ ಮತ್ತೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಬೆಂಕಿಯನ್ನು ನಂದಿಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರವು ಶಿಲ್ಲಾಂಗ್‌ನಲ್ಲಿ ಕರ್ಫ್ಯೂ ವಿಧಿಸಿದೆ ಮತ್ತು ಕನಿಷ್ಠ ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಿದೆ. ಸ್ವಾತಂತ್ರ್ಯೋತ್ಸವದ ದಿನದಂದೇ ಈ ಘಟನೆ ನಡೆದಿದ್ದು, ಅಪರಿಚಿತರು ರಾಜ್ಯ ರಾಜಧಾನಿಯಲ್ಲಿ ವಿದ್ವಂಸಕ ಕೃತ್ಯವೆನ್ನೆಸಗಲು ಹೊಂಚು ಹಾಕಿದ್ದರು ಎಂದು ತಿಳಿದು ಬಂದಿದೆ.
ಘಟನೆಯ ಬೆನ್ನಲ್ಲೇ ಮೇಘಾಲಯದ ಗೃಹ ಸಚಿವ ಲಹ್ಕ್‌ಮೆನ್ ರಿಂಬುಯಿ ರಾಜೀನಾಮೆಯನ್ನು ಸಲ್ಲಸಿದ್ದು, ಈ ಬಗ್ಗೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post