ಕಲ್ಪ ಮೀಡಿಯಾ ಹೌಸ್ | ಶಿಮ್ಲಾ |
ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕಂಗನಾ ರಾಣಾವತ್ #Kangana Ranawat ಅವರಿಗೆ ಹಿಮಾಚಲ ಪ್ರದೇಶ ಹೈಕೋರ್ಟ್ ನೋಟೀಸ್ ಜಾರಿ ಮಾಡಿದ್ದು, ಅವರ ಸಂಸದ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಅರ್ಜಿಗೆ ಸಂಬಂಧಿಸಿದಂತೆ ಕಂಗನಾಗೆ ನೋಟೀಸ್ ಜಾರಿ ಮಾಡಲಾಗಿದ್ದು, ಆಗಸ್ಟ್ ೨೧ರ ಒಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಿದೆ.
ಏನಿದು ಪ್ರಕರಣ?
ಕಿನ್ನೌರ್ ನಿವಾಸಿ ಲಾಯಿಕ್ ರಾಮ್ ನೇಗಿ ಎನ್ನುವವರು ಲೋಕಸಭಾ ಚುನಾವಣೆಗೆ ಮಂಡಿ ಕ್ಷೇತ್ರದಿಂದ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ, ಚುನಾವಣಾಧಿಕಾರಿಗಳು ನಾಮಪತ್ರವನ್ನು ತಿರಸ್ಕರಿಸಿದ್ದರು.
Also read: ರೇಡಿಯೋ ಶಿವಮೊಗ್ಗ | ಕಾರ್ಗಿಲ್ ವಿಜಯ ದಿವಸ | ದಾಖಲೆಯ 12 ಗಂಟೆಗಳ ಲೈವ್ ಯಶಸ್ವಿ
ಈ ಕುರಿತಂತೆ ಚುನಾವಣಾಧಿಕಾರಿಗಳು ತಮ್ಮ ನಾಮಪತ್ರವನ್ನು ತಪ್ಪಾಗಿ ತಿರಸ್ಕರಿಸಿದ್ದಾರೆ. ತಮ್ಮ ನಾಮಪತ್ರವನ್ನು ಸರಿಯಾಗಿ ಪರಿಶೀಲಿಸಿ, ಅಂಗೀಕರಿಸಿದ್ದರೆ ಚುನಾವಣೆಯಲ್ಲಿ ತಾನು ಗೆಲ್ಲುತ್ತಿದ್ದೆ. ಹೀಗಾಗಿ, ಕಂಗನಾ ಅವರ ಆಯ್ಕೆಯನ್ನು ರದ್ದು ಮಾಡಬೇಕು ಎಂದು ರಾಮ್ ನೇಗಿ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
ಕಂಗನಾ ಅವರು ಮಂಡಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರನ್ನು 74,755 ಮತಗಳಿಂದ ಸೋಲಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post