ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೌತಿ ಖಾತೆ ಮಾಡಿಕೊಡಲು 25 ಸಾವಿರ ರೂಪಾಯಿ ಲಂಚ ಕೇಳಿ, ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಸಂಜಯ್ ಮೋಹಿತೆ ಎಸ್.ಆರ್. ಎನ್ನುವವರನ್ನು ಲೋಕಾಯುಕ್ತ ಪೊಲೀಸರು #LokayuktaPolice ಬಲೆಗೆ ಕೆಡವಿದ್ದಾರೆ.
ಶಿವಮೊಗ್ಗ ಕಸಬಾ-1 ಗ್ರಾಮ ಆಡಳಿತ ಅಧಿಕಾರಿ(ವಿಎ) ಎಸ್.ಆರ್. ಸಂಜಯ್ ಮೋಹಿತೆ ಎನ್ನುವವರು ಆಗಸವಳ್ಳಿ ಹೂಸೂರು ಗ್ರಾಮದ ಮುನಿರಂಗೇಗೌಡ ಅಲಿಯಾಸ್ ಕಿರಣ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಮುನಿರಂಗೇಗೌಡ ಅವರು ತಮ್ಮ ಅಜ್ಜನ ಹೆಸರಿನಲ್ಲಿರುವ ಜಮೀನನ್ನು ಅಜ್ಜಿಯ ಹೆಸರಿಗೆ ಪೌತಿ ಖಾತೆ ಮಾಡಲು ಶಿವಮೊಗ್ಗ #Shivamogga ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಹೋಗಿ ಅರ್ಜಿಯ ಬಗ್ಗೆ ವಿಚಾರಿಸಿದಾಗ ಪೌತಿ ಖಾತೆ ಬದಲಾವಣೆ ಮಾಡಬೇಕಾದರೆ 25 ಸಾವಿರ ರೂ. ಹಣ ನೀಡಬೇಕೆಂದು ಸಂಜಯ್ ಮೋಹಿತೆ ಬೇಡಿಕೆ ಇಟ್ಟಿದ್ದರು.
ಬುಧವಾರ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಸಂಜಯ್ ಮೋಹಿತೆ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲಂಚ #Bribe ಕೇಳಿದ ಮೊಬೈಲ್ ಆಡಿಯೋವನ್ನೂ ಲೋಕಾಯುಕ್ತ ಪೊಲೀಸರಿಗೆ ದೂರುದಾರರು ನೀಡಿದ್ದರು.
ಲೋಕಾಯುಕ್ತ ಎಸ್’ಪಿ ಎಂ.ಎಚ್. ಮಂಜುನಾಥ ಚೌದರಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್’ಪೆಕ್ಟರ್ ಎಚ್.ಎಸ್. ಸುರೇಶ್, ಸಿಬ್ಬಂದಿಗಳಾದ ಯೋಗೇಶ್, ಟೀಕಪ್ಪ, ಸುರೇಂದ್ರ, ಪ್ರಶಾಂತ್ ಕುಮಾರ್, ಚೆನ್ನೇಶ್, ಅರುಣ್ ಕುಮಾರ್, ದೇವರಾಜ್, ಎನ್. ಪುಟ್ಟಮ್ಮ, ಗಂಗಾಧರ, ಪ್ರದೀಪ್, ಜಯಂತ್ ಮತ್ತು ತರುಣ್ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post