ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಶ್ಚಿಮ ಸಂಚಾರಿ ಠಾಣೆ ಪೊಲೀಸರು ಇಂದು ನಡೆಸಿದ ಕಾರ್ಯಾಚರಣೆಯಲ್ಲಿ ನಂಬರ್ ಪ್ಲೇಟ್ #NumberPlate ಇಲ್ಲದ ಬರೋಬ್ಬರಿ 50 ದ್ವಿಚಕ್ರ ವಾಹನಗಳನ್ನು ಪತ್ತೆ ಮಾಡಿದ್ದು, ಭಾರೀ ಮೊತ್ತದ ದಂಡ ವಿಧಿಸಿದ್ದಾರೆ.
ನಗರ ಪಶ್ಚಿಮ ಸಂಚಾರ ಪೊಲೀಸರು ಇಂದು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ನಂಬರ್ ಪ್ಲೇಟ್ ಇಲ್ಲದ ಸುಮಾರು 50 ದ್ವಿಚಕ್ರ ವಾಹನಗಳನ್ನು ಪತ್ತೆ ಪಡೆದಿದ್ದಾರೆ.

Also read: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ
ಈ ವೇಳೆ ಸದರಿ ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ಕೊಟ್ಟ ಪೊಲೀಸರು, ನಂಬರ್ ಪ್ಲೇಟ್ ಇಲ್ಲದೇ ಬೇಕಾಬಿಟ್ಟಿಯಾಗಿ ಓಡಾಡಿಕೊಂಡಿದ್ದರೂ ಪೊಲೀಸರು ಏನೂ ಮಾಡುವುದಿಲ್ಲ, ದಂಡ ವಿಧಿಸಿ ಬಿಡುತ್ತಾರೆ ಎಂಬ ತಾತ್ಸಾರ ಮನಸ್ಸಿನಲ್ಲಿದ್ದರೆ ತೆಗೆದುಬಿಡಿ. ಇದೊಂದು ಬಾರಿ ಎಚ್ಚರಿಕೆ ನೀಡುತ್ತಿದ್ದೇವೆ. ಸರಿಯಾಗಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ವಾಹನ ಚಾಲನೆ ಮಾಡಿ. ಇಲ್ಲದೇ ಹೋದಲ್ಲಿ ಕಠಿಣಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post