No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಂದಿನ ಮೂರು ತಿಂಗಳಲ್ಲಿ ಶಿವಮೊಗ್ಗದ ರಸ್ತೆಗಳಿಗೆ ಒಂದು ರೂಪ: ಈಶ್ವರಪ್ಪ ಭರವಸೆ

kalpa News by kalpa News
February 11, 2021
in ಶಿವಮೊಗ್ಗ
0
ಮುಂದಿನ ಮೂರು ತಿಂಗಳಲ್ಲಿ ಶಿವಮೊಗ್ಗದ ರಸ್ತೆಗಳಿಗೆ ಒಂದು ರೂಪ: ಈಶ್ವರಪ್ಪ ಭರವಸೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ರಸ್ತೆಗಳು ಹಾಳಾಗಿದ್ದು, ನಗರದ ಜನರಿಗೆ ತೊಂದರೆಯಾಗುತ್ತಿದೆ ನಿಜ. ಆದರೆ, ಮುಂದಿನ ಮೂರು ತಿಂಗಳ ಒಳಗಾಗಿ ನಗರದ ರಸ್ತೆಗಳಿಗೆ ಒಂದು ಹೊಸ ರೂಪ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು.

ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ವೇಳೆ ಮಾತನಾಡಿದ ಅವರು, ಒಂದು ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಬೇಕು ಎಂದರೆ ಅದರಿಂದ ಒಂದಷ್ಟು ತಾತ್ಕಾಲಿಕ ತೊಂದರೆಗಳು ಆಗುತ್ತವೆ. ಆದರೆ, ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ತೊಂದರೆಯಾಗುತ್ತಿದ್ದರೂ ಸಹ ಅಭಿವೃದ್ಧಿಗಾಗಿ ಜನರು ಇದನ್ನು ಸಹಿಸಿಕೊಂಡಿದ್ದಾರೆ. ಹೀಗಾಗಿ, ಈಗಾಗಲೇ ವೇಗವಾಗಿ ಸಾಗುತ್ತಿರುವ ಕಾಮಗಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಮುಂದಿನ ಮೂರು ತಿಂಗಳ ಒಳಗಾಗಿ ನಗರದ ರಸ್ತೆಗಳಿಗೆ ಒಂದು ರೂಪ ನೀಡಲಾಗುವುದು ಎಂದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದಕ್ಕೆ ಆದ್ಯತೆ ನೀಡಲಾಗಿದೆ. ಕೆಲವೊಂದು ಕಡೆಗಳಲ್ಲಿ ಮಾತ್ರ ಸಣ್ಣಪುಟ್ಟ ಲೋಪದೋಷಗಳಾಗಿದ್ದು, ಇದನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸ್ಮಾರ್ಟ್‌ಸಿಟಿ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಇನ್ನು ಕೆಲವು ದಿನಗಳಲ್ಲಿ ಮಾದರಿ ನಗರವಾಗಿ ರೂಪುಗೊಳ್ಳಲಿದೆ ಎಂದರು.

ಕಾಮಗಾರಿಗಳನ್ನು ಖುದ್ದು ವೀಕ್ಷಿಸಿದ್ದು, ಕೆಲವು ಕಡೆಗಳಲ್ಲಿ ನ್ಯೂನತೆಗಳಿರುವುದನ್ನು ಗುರುತಿಸಲಾಗಿದ್ದು, ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉಳಿದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳ ವೀಕ್ಷಣೆ ತೃಪ್ತಿಕರವಾಗಿದೆ ಎಂದರು.

ಕೋವಿಡ್ ಕಾರಣದಿಂದಾಗಿ ಕಾರ್ಮಿಕರು ಸಕಾಲದಲ್ಲಿ ಲಭ್ಯವಾಗದೆ ಕುಂಟುತ್ತಾ ಸಾಗಿದ್ದ ಕಾಮಗಾರಿಗಳಿಗೆ ಮತ್ತು ವೇಗ ದೊರೆತು ತ್ವರಿತವಾಗಿ ನಡೆಯುತ್ತಿವೆ. ನಿಗಧಿತಪಡಿಸಿದ ಗುರಿಯಂತೆ ಕಾಮಗಾರಿಗಳ ವೇಗವೂ ಹೆಚ್ಚಿದೆ. ಈ ಅವಧಿಯಲ್ಲಿ ಸಾರ್ವಜನಿಕರಿಗೆ, ನಗರ ನಿವಾಸಿಗಳಿಗೆ ಅಡಚಣೆಯಾಗಿರುವ ಅರಿವು ನಮಗಿದೆ. ಆದರೆ ಅದು ತಾತ್ಕಾಲಿಕವೂ ಅನಿವಾರ್ಯವೂ ಆಗಿದೆ ಎಂದರು.

ಎಂಟು ಎಕರೆ ವಿಸ್ತೀರ್ಣದಲ್ಲಿ ಕೈಗೊಂಡ ಪ್ರೀಡಂ ಪಾರ್ಕ್‌ನ ಅಭಿವೃದ್ಧಿ ಕಾರ್ಯಗಳು ಮುಕ್ತಾಯ ಹಂತದಲ್ಲಿದೆ. ಮುಂದಿನ ಮಳೆಗಾಲ ಆರಂಭವಾಗುವುದರೊಳಗಾಗಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡು ಶಿವಮೊಗ್ಗ ನಗರಕ್ಕೆ ಹೊಸ ಕಳೆ ಬರಲಿದೆ. ರಾಜೇಂದ್ರನಗರದ ಇಕ್ಕೆಲಗಳಲ್ಲಿನ ಚಾನಲ್, ರಸ್ತೆಗಳಲ್ಲಿ ಬಿದ್ದಿದ್ದ ಭಾರೀ ಪ್ರಮಾಣದ ಮಣ್ಣನ್ನು ತೆಗೆದು, ಹಸಿರು ವಾತಾವರಣ, ಉದ್ಯಾನವನ ನಿರ್ಮಿಸಲು ಹಾಗೂ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಚಾನಲ್ ಆರಂಭದಿಂದ ಮುಕ್ತಾಯದ ಅವಧಿಯವರೆಗೆ ಚಾನಲ್‌ಗಳಲ್ಲಿನ ಕಸವನ್ನು ತೆಗೆದು ಸದಾ ಶುದ್ಧ ನೀರು ಹರಿಯುತ್ತಿರುವಂತೆ ನಿರ್ಮಿಸಲು ನೋಡಿಕೊಳ್ಳಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಕರ್ನಾಟಕ ನೀರಾವರಿ ನಿಗಮ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲು ಮಾರ್ಚ್ ಮೊದಲ ವಾರದಲ್ಲಿ ಸಭೆ ಏರ್ಪಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ನಗರದ ತಿಲಕ್‌ನಗರ, ಕುವೆಂಪು ರಸ್ತೆ, ರಾಜೇಂದ್ರ ನಗರ, ಬಾಲರಾಜ್ ಅರಸ್‌ರಸ್ತೆ, ಫ್ರೀಡಂ ಪಾರ್ಕ್, ಆಲ್ಕೊಳ ಸರ್ಕಲ್ ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಚನ್ನಬಸಪ್ಪ, ಸೇರಿದಂತೆ ಆಯಾ ವಾರ್ಡುಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: K S EshwarappaKannada News WebsiteLatest News KannadaLocal NewsMalnad NewsShimogaShivamoggaShivamogga NewsSmart Cityಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಸ್ಮಾರ್ಟ್‌ಸಿಟಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅತ್ಮನಿರ್ಭಾರ ಭಾರತ ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು: ನೆ.ಲ.ನರೇಂದ್ರ ಬಾಬು

Next Post

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

kalpa News

kalpa News

Next Post
ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL