ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ದೊಡ್ಡಮ್ಮ ದೇವಸ್ಥಾನದ ಬಳಿ ಕಾಮಗಾರಿ ವೇಳೆ ಕ್ರೇನ್‌ಗೆ #Crane ಸಿಕ್ಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಳಿಗುಡಿ ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.
ನಾಗೇಶ್ ಅವರು ದೇವಸ್ಥಾನದ ಕಾಮಗಾರಿಗಾಗಿ ನಿನ್ನೆ ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಂದು ಕೆಲಸ ನಿರ್ವಹಿಸುವ ವೇಳೆ ಕ್ರೇನ್‌ಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Also Read>> ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ
ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದ್ದು, ಘಟನೆ ನಡೆದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ಸಂಬಂಧ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news












Comments 1