ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಎಪ್ರಿಲ್ ಮತ್ತು ಮೇ ತಿಂಗಳ ಪಡಿತರವನ್ನು ಈಗಾಗಲೇ ವಿತರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಜನರ ನೂಕುನುಗ್ಗಲಾಗದಂತೆ ಸಾಮಾಜಿಕ ಅಂತರವನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳ ಎದುರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಗುರುತು ಮಾಡುವಂತೆ ಸೂಚನೆ ನೀಡಲಾಗಿದೆ. ಎಲ್ಲಾ ನ್ಯಾಯಬೆಲೆ ಅಂಗಡಿಗಳ ಎದುರು ಗುರುತು ಬಾಕ್ಸ್ ಮಾಡಲಾಗಿದೆ. ಜನರು ಕಡ್ಡಾಯವಾಗಿ ನಿಗದಿತ ಗುರುತಿನ ಒಳಗೆ ನಿಂತು ಕೊಂಡು ಸರತಿ ಸಾಲಿನಲ್ಲಿ ಪಡಿತರವನ್ನು ಪಡೆಯುವಂತೆ ಅವರು ಸೂಚನೆ ನೀಡಿದ್ದಾರೆ.
ಕೆಲವು ಕಡೆ ಜನರು ನಿಗದಿತ ಗುರುತಿನ ಒಳಗೆ ನಿಲ್ಲದೆ, ಗುಂಪಾಗಿ ನಿಲ್ಲುತ್ತಿರುವ ಬಗ್ಗೆ ದೂರುಗಳು ಬಂದಿವೆ. ಪ್ರತಿಯೊಂದು ಕಡೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರುವುದನ್ನು ಖಾತ್ರಿಪಡಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪಿಡಿಒಗಳು, ನಗರ ಮಟ್ಟದಲ್ಲಿ ಆಹಾರ ನಿರೀಕ್ಷಕರು, ಮಹಾನಗರ ಪಾಲಿಕೆ ಸಿಬ್ಬಂದಿಗಳು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳ ಮಾಲಿಕರಿಗೆ ಎಚ್ಚರಿಕೆ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
Get in Touch With Us info@kalpa.news Whatsapp: 9481252093







Discussion about this post