ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೈಲ್ವೆ ನಿಲ್ದಾಣದ #RailwayStation ಎದುರಿನಲ್ಲಿ ಸಂಜೆ ಎರಡು ಅನಾಮಧೇಯ ಬಾಕ್ಸ್ #Box ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ.
ರೈಲ್ವೆ ನಿಲ್ದಾಣದ ಸಮೀಪ ಎರಡು ಅನುಮಾನಾಸ್ಪದವಾಗಿ ಗೋಣಿ ಚೀಲದಿಂದ ಸುತ್ತಿರುವ ಕಬ್ಬಿಣದ ಬಾಕ್ಸ್ ಪತ್ತೆಯಾಗಿದೆ. ಈ ಬಾಕ್ಸ್’ಗಳ ಮೇಲೆ ಮೇಡ್ ಇನ್ ಬಾಂಗ್ಲಾದೇಶ, ಫುಡ್ ಗ್ರೇನ್ಸ್ ಎಂದು ಬರೆಯಲಾಗಿದೆ. ಸರ್ವಮಂಗಳ ಎಂಬ ಹೆಸರು ಬರೆದು ಸ್ಟಾçಂಡ್ ರೋಡ್, ಕೋಲ್ಕತ್ತ ಎಂಬ ವಿಳಾಸವು ಇದೆ.

ಇನ್ನು ಬಾಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅನುಮಾನಾಸ್ಪದವಾಗಿ ಕಾರು ಬಂದಿರುವುದು ಪತ್ತೆಯಾಗಿದೆ.
ಕಾರಿನ ನಂಬರ್ ಆಧರಿಸಿ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ. ತಿಪಟೂರಿನಲ್ಲಿ ವ್ಯಕ್ತಿಯೊಬ್ಬನ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು, ಶಿವಮೊಗ್ಗದಲ್ಲಿ ಮತ್ತೊಬ್ಬನ ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಇನ್ನು, ಪ್ರಕರಣ ಸಂಬಂಧ ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಅಗಮಿಸಿದ್ದು, ಪರಿಶೀಲನೆ ನಡೆಸಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಇಡಿಯ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post