ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟ ಕಾಲೇಜುಗಳಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿ, ಪ್ರಸ್ತುತ ವಿವಿಧ ಇಲಾಖೆ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಮತ್ತೊಮ್ಮೆ ಎನ್‌ಎಸ್‌ಎಸ್ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಮುಕ್ತ ಅವಕಾಶವನ್ನು ಕುವೆಂಪು ವಿಶ್ವವಿದ್ಯಾಲಯ ಕಲ್ಪಿಸಿ ಕೊಡುತ್ತಿದೆ.
ಆಸಕ್ತಿ ಇರುವ ಪ್ರತಿಭಾನ್ವಿತ ಹಿರಿಯ ಸ್ವಯಂ ಸೇವಕರಿಗೆ ವೇದಿಕೆಯನ್ನು ನೀಡುವ ಮೂಲಕ ಅವರಿಂದ ಪ್ರಸ್ತುತವಿರುವ ಸ್ವಯಂ ಸೇವಕರಿಗೆ ಮಾರ್ಗದರ್ಶನ, ಪ್ರೇರಣೆ ನೀಡುವ ಮತ್ತು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಈ ಮುಕ್ತ ಘಟಕವನ್ನು ಆರಂಭಿಸಲಾಗುತ್ತಿದೆ.
ಸೇವಾ ಮನೋಭಾವವಿರುವವರು ಮುಕ್ತ ಘಟಕಕ್ಕೆ ಸೇರಲು ಅವಕಾಶವಿರುತ್ತದೆ ಎಂದು ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಇವರು ತಿಳಿಸಿದ್ದಾರೆ.
ಆಸಕ್ತರು ದೂರವಾಣಿ ಸಂಖ್ಯೆ 08182-240777, ಮೊಬೈಲ್ ಸಂಖ್ಯೆ: 8217683647 ಅಥವಾ 901706230ಗೆ ಸಂಪರ್ಕಿಸಬಹುದು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post