ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ 2018-19ನೆಯ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಅಧಿಕ ಅಂಕ ಗಳಿಸಿರುವ ಪರಿಶಿಷ್ಟ ಜಾತಿ ಹಾಗೂ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚಿನ ಅಂಕ ಪಡೆದವರಿಗೆ 7000 ರೂ., ಶೇ.75 ಕ್ಕಿಂತ ಹೆಚ್ಚಿನ ಅಂಕ ಗಳಿಸಿದವರಿಗೆ 15000 ರೂ.ಗಳ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದ್ದು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅರ್ಜಿಯ ಜೊತೆಗೆ ಎಸ್‌ಎಸ್‌ಎಲ್‌ಸಿ ನೋಂದಣಿ ಸಂಖ್ಯೆ, ಆಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಆರ್’ಡಿ ಸಂಖ್ಯೆ ಪಾಸ್‌ಪೋರ್ಟ್ ಅಳತೆಯ ಫೋಟೋ, ಎಸ್‌ಎಸ್‌ಎಲ್‌ಸಿ ಪ್ರಮಾಣ ಪತ್ರ ಹಾಗೂ ಆಧಾರ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಯ ವರವನ್ನು ಸಲ್ಲಿಸಲು ತಿಳಿಸಲಾಗಿದೆ.
ಅರ್ಜಿಯನ್ನು www.sw.kar.nic.in 2019ರ ಡಿ.31 ರೊಳಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ದೂ.ಸಂ.: 08182-240512 ಗೆ ಸಂಪರ್ಕಿಸಬಹುದು.
Discussion about this post