ಶಿವಮೊಗ್ಗ: ಜಿಲ್ಲೆಯ ಪತ್ರಿಕಾ ಛಾಯಾಗ್ರಾಹಕ ಕೆ.ಆರ್. ಸೋಮನಾಥ್ ಮೇಲೆ ನಿನ್ನೆ ರಾತ್ರಿ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ರಾಜೇಂದ್ರ ನಗರದಲ್ಲಿರುವ ತಮ್ಮ ಮನೆಗೆ ನಿನ್ನೆ ರಾತ್ರಿ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಮುಸುಕುಧಾರಿಗಳು ಹಿಂದಿನ ರಾಡ್ ಮೂಲಕ ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಇದನ್ನು ಗಮನಿಸಿ ತತಕ್ಷಣವೇ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಆಸ್ಪತ್ರೆ ಜಿಲ್ಲಾ ಪೊಲೀಸ್ ವರಿಷ್ಠ ಅಭಿನವ್ ಖರೆ ಭೇಟಿ ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
Discussion about this post