ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಅಧಿಕಾರಿಗಳು ಫೆ.19ರ ಮಧ್ಯಾಹ್ನ 12ರಿಂದ 2ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ಅರ್ಜಿ ಹಾಗೂ ಸರ್ಕಾರಿ ಕರ್ತವ್ಯ ನಿರ್ವಹಿಸಲು ಲಂಚಕ್ಕಾಗಿ ಒತ್ತಾಯ, ವಿಳಂಬ ಮತ್ತು ನಿರ್ಲಕ್ಷ್ಯ ತೋರಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಲಿಖಿತ ಅಹವಾಲುಗಳನ್ನು ಸ್ವೀಕರಿಸಲು ಸಭೆ ನಡೆಸಲಿದ್ದಾರೆ.
ಭದ್ರಾವತಿಯ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಅರ್ಜಿ, ಅಹವಾಲನ್ನು ಸಲ್ಲಿಸುವಂತೆ ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















