ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂ.ಎಲ್. ವೈಶಾಲಿ ಅವರ ವರ್ಗಾವಣೆಯಿಂದ ತೆರವಾದ ಜಿಲ್ಲಾ ಪಂಚಾಯತ್ ಪ್ರಭಾರಿ ಮುಖ್ಯ ಯೋಜನಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ಥಾನಕ್ಕೆ ಎನ್.ಡಿ. ಪ್ರಕಾಶ್ ಅವರನ್ನು ನಿಯೋಜಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ರಾಜ್ಯ ಪಂಚಾಯತ್ ಸಂಪನ್ಮೂಲ ಕೇಂದ್ರದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಕಾಶ್ ಅವರನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ.
ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಎಂ.ಎಲ್. ವೈಶಾಲಿ ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ಪದೋನ್ನತಿಯೊಂದಿಗೆ ವರ್ಗಾವಣೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















