ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಇನ್ನಿತರ ಅಹವಾಲುಗಳನ್ನು ಸಾರ್ವಜನಿಕರು ಸಲ್ಲಿಸಲು 1950 ಟೋಲ್ ಫ್ರೀ ಸಹಾಯವಾಣಿಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾರಂಭಿಸಲಾಗಿದೆ.
ಬೆಳಿಗ್ಗೆ 9 ರಿಂದ ರಾತ್ರಿ 9ರ ಅವಧಿಯಲ್ಲಿ ಸಾರ್ವಜನಿಕರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಅಹವಾಲು ದಾಖಲಿಸಬಹುದಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಕೇವಲ 20 ಅಹವಾಲುಗಳನ್ನು ಮಾತ್ರ ಸಹಾಯವಾಣಿ ಅಡಿ ಸ್ವೀಕರಿಸಲಾಗಿದ್ದು, ಇದರ ಉಪಯೋಗವನ್ನು ಸಾರ್ವಜನಿಕರು ಗರಿಷ್ಟ ಪ್ರಮಾಣದಲ್ಲಿ ಪಡೆದುಕೊಳ್ಳಬಹುದಾಗಿದೆ.
ಈಗಾಗಲೇ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದನ್ನು ಪರಿಶೀಲಿಸಿ ಒಂದು ವೇಳೆ ತಮ್ಮ ಹೆಸರು ಇಲ್ಲದಿದ್ದರೆ ಅಥವಾ ಇಲ್ಲದವರ ಹೆಸರು ತಪ್ಪಾಗಿ ಪ್ರಕಟವಾಗಿದ್ದರೆ 1950 ಸಂಖ್ಯೆಗೆ ಕರೆ ಮಾಡಿ ದಾಖಲಿಸಬಹುದಾಗಿದೆ ಎಂದರು.
(ವರದಿ: ಡಾ.ಸುಧೀಂದ್ರ)
Discussion about this post