ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪನವರ ಅಭಿನಂದನಾ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಫೆ.27ರಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಶಿವಮೊಗ್ಗ ನಗರ ಮತ್ತು ಜಿಲ್ಲೆಯನ್ನು ಅತ್ಯಂತ ಯಶಸ್ವಿಯಾಗಿ ತೆಗೆದುಕೊಂಡು ಹೋದ ಕೀರ್ತಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೇರುತ್ತದೆ. ಪಶು ವೈದ್ಯಕೀಯ ಕಾಲೇಜು, ಕೃಷಿ ಕಾಲೇಜ್ ಹಾಗೂ ಸೊರಬ, ಶಿಕಾರಿಪುರದಲ್ಲಿ ನೀರಾವರಿ ಯೋಜನೆಗಳನ್ನು ಬಿಡುಗಡೆ ಮಾಡಿ ತಾಲೂಕುಗಳ ಅಭಿವೃದ್ಧಿಗೂ ಹೆಚ್ಚಿನ ಗಮನ ನೀಡಿದ್ದಾರೆ.
ವಿಮಾನ ನಿಲ್ದಾಣ, ಕೈಗಾರಿಕೆಗೆ ಒತ್ತು ಹೀಗೆ ಹಲವು ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಫೆ.27ರಂದು ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಫ್ರೀಡಂ ಪಾರ್ಕ್ (ಹಳೇ ಜೈಲು) ಆವರಣದಲ್ಲಿ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ತಿಳಿಸಿದರು.
ಡಿ.ಎಸ್. ಅರುಣ್ ಮಾತನಾಡಿ, ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಫೆ. 27 ರಂದು ನಗರಕ್ಕೆ ಆಗಮಿಸಲಿದ್ದು, ಅಂದು ಸುದ್ದಿಗೋಷ್ಠಿಯಲ್ಲಿ ಹಾಜರಿರಲಿದ್ದಾರೆ. ಸ್ಟೇಜ್-2ನಲ್ಲಿ ಫೆ.28ರಂದು ವಿಜಯ ಪ್ರಕಾಶ್ ಮತ್ತು ರಾಜೇಶ್ ಕೃಷ್ಣನ್ ಅವರಿಂದ ಭಾವಾನಂದನಾ ಕಾರ್ಯಕ್ರಮ ನಡೆಯಲಿದೆ ಎಂದರು.
ಮಾರ್ಚ್ 1 ರಂದು ಆಶ್ವಾಸ್ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಈ ಎರಡೂ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post