ಶಿವಮೊಗ್ಗ: ಭಾರೀ ಮಳೆಯಿಂದ ತತ್ತರಿಸಿರುವ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಶತಮಾನದ ಹಿಂದಿನ ತುಂಗಾ ಹಳೆಯ ಸೇತುವೆಯ ಅಂಚಿನಲ್ಲಿ ಬಿರುಕು ಬಿಟ್ಟಿದ್ದು, ಪರಿಣಾಮವಾಗಿ ಸೇತುವೆ ಮೇಲಿನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇನ್ನು, ಶಿವಮೊಗ್ಗದಲ್ಲಿ ಮಳೆ ನೀರು ಹೆಚ್ಚಾಗಿರುವುದರಿಂದ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಲಿದೆ. ಮತ್ತು ಮುಂದೆ ಇನ್ನು ಪ್ರವಾಹವಾಗುವ ಸಾಧ್ಯತೆಗಳು ಹೆಚ್ಚಾಗಿರುವುದು ಕಂಡುಬಂದಿದೆ. ಕೆಲವು ಕೆಳಭಾಗದಲ್ಲಿರುವ ಜಾಗಗಳಿಗೆ ಇದರಿಂದ ತೊಂದರೆ ಉಂಟಾಗಿದ್ದು, ಮುಂದೆ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸಮಸ್ಯೆ ಉದ್ಬವವಾಗುವ ಸಾಧ್ಯತೆ ಇದೆ.
ಈ ಕುರಿತಂತೆ ಮಾತನಾಡಿರುವ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು, ಮಹಾನಗರ ಪಾಲಿಕೆಯ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗಳು ತಪ್ಪದೇ ಸ್ಥಳದಲ್ಲಿ ಇರಬೇಕಾಗುತ್ತದೆ ಮತ್ತು ಎಂತಹ ಪರಿಸ್ಥಿತಿಯಲ್ಲಿಯೂ ಸಹ ಜನರಿಗೆ ಸ್ಪಂದಿಸಬೇಕು ಎಂದು ಸೂಚಿಸಿದ್ದಾರೆ.
ಜನರ ಜೀವಕ್ಕೆ ಯಾವುದೇ ರೀತಿಯ ಹಾನಿಯಾಗಬಾರದು. ಜನರನ್ನು ಅಪಾಯದಿಂದ ಬದುಕಿಸುವುದು ನಮ್ಮ ಧ್ಯೇಯವಾಗಿದೆ. ಅಧಿಕಾರಿಗಳು ಸ್ಥಳದಲ್ಲಿ ಅವಶ್ಯವಿರುವ ನಿರ್ಧಾರ ತೆಗೆದುಕೊಳ್ಳಬಹುದು. ಸುರಕ್ಷತೆ ಮತ್ತು ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಬಹುದು ಎಂದಿದ್ದಾರೆ.
ಪ್ರವಾಹ ಪರಿಸ್ಥಿತಿ ನಿಭಾಯಿಸಲು ವಿವಿಧ ಇಲಾಖೆಗಳ ಸಹಯೋಗದಲ್ಲಿ 10 ತಂಡಗಳನ್ನು ರಚಿಸಲಾಗಿದ್ದು, ಅಗತ್ಯ ಸಾಧನ ಸಲಕರಣೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಮೇಲೆ ನಿರಂತರ ನಿಗಾ ವಹಿಸಲಾಗಿದೆ.
Discussion about this post