ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರ ಪರವಾಗಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಕಚೇರಿಗಳ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರರಲ್ಲಿ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಪ್ರವೀಣ್ ಕುಮಾರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಇ.ಟಿ. ನಿತಿನ್ ರಾವ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಆರ್. ಕಿರಣ್, ಟಿ.ವಿ ರಂಜಿತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಧರ್, ಎಂ. ರಾಹುಲ್, ವಿಜಯ್ , ಎಸ್.ಎನ್. ಪವನ್ ಕುಮಾರ್ ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನವಲೆ ಅರುಣ್ ಕುಮಾರ್ ಹಲವಾರು ಯುವ ಕಾಂಗ್ರೆಸ್ ಮಿತ್ರರು ಉಪಸ್ಥಿತರಿದ್ದರು.
Discussion about this post