ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಫ್ರೀಡಂ ಪಾರ್ಕ್’ನಲ್ಲಿ #FreedomPark ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ದಾಳಿಗೊಳಗಾದ ವ್ಯಕ್ತಿಯನ್ನು ಶಶಿ ಎಂದು ಗುರುತಿಸಲಾಗಿದ್ದು, ಈತ ಗಾರೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಎಂದು ಹೇಳಲಾಗಿದೆ.
ಶಶಿ ಇಲ್ಲಿನ ವಾಕಿಂಗ್ ಪಾಥ್ ಮೇಲೆ ನಡೆದುಕೊಂಡು ಹೋಗುವ ವೇಳೆ ಬೈಕ್’ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಯುವಕ ಸ್ವಲ್ಪದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಆರ್ಕೆಸ್ಟ್ರಾ ಹಾಡಿನ ವಿಚಾರದಲ್ಲಿ ಶಶಿ ಹಾಗೂ ಇತರರ ನಡುವೆ ವಾಗ್ವಾದ ನಡೆದಿತ್ತು ಎಂದು ಹೇಳಲಾಗಿದೆ. ಇದರ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.
ಹಲ್ಲೆಗೆ ನಿಖರ ಕಾರಣ ತನಿಖೆಯಿಂದಷ್ಟೇ ಹೊರಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post