ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರೋಟರಿ ಕ್ಲಬ್‌ನ ವತಿಯಿಂದ ಗಾಜನೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ “ಜ್ಞಾನ ದೀವಿಗೆ” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕೆಎಸ್‌ಎಸ್‌ಐಡಿಸಿಯ ಉಪಾಧ್ಯಕ್ಷ ಎಸ್ ದತ್ತಾತ್ರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಿ ಪ್ರೋತ್ಸಾಹಿಸಲಾಯಿತು.

ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೆಂದ್ರ, ರೋಟರಿ ಸಂಸ್ಥೆಯ ಪ್ರೆಸಿಡೆಂಟ್ ಹೆಚ್.ಎಸ್. ಮೋಹನ್, ಮಾಜಿ ರೋಟರಿ ಗವರ್ನರ್ ಹೆಚ್.ಎಲ್. ರವಿ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















