Read - < 1 minute
ಶಿವಮೊಗ್ಗ: ಹೌಸಿಂಗ್ ಕೋ ಆಪರೇಟೀವ್ ಸೊಸೈಟಿಗೆ 2020-2025ರ ಸಾಲಿನ ನಿರ್ದೇಶಕರ ಚುನಾವಣಾ ಪ್ರಚಾರಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಯಿತು.
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹೌಸಿಂಗ್ ಕೋ ಆಪರೇಟೀವ್ ಸೊಸೈಟಿಗೆ 2020-2025ರ ಸಾಲಿನ ನಿರ್ದೇಶಕರ ಚುನಾವಣಾ ಪ್ರಚಾರಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಯಿತು.
ಫೆ.2ರಂದು ನಿರ್ದೇಶಕರ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಾನದಿಂದಲೇ ಚುನಾವಣಾ ಪ್ರಚಾರವನ್ನು ಆರಂಭಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಎಸ್.ಕೆ. ಮರಿಯಪ್ಪ, ಕೆ. ರಂಗನಾಥ್, ರುಕ್ಮಿಣಿ ವೇದವ್ಯಾಸ್, ಸಿ. ಹೊನ್ನಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಫೆ.2ರ ಭಾನುವಾರ ಬೆಳಗ್ಗೆ 9ರಿಂದ 4 ಗಂಟೆಯವರೆಗೂ ಚುನಾವಣೆ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದೆ.
Get in Touch With Us info@kalpa.news Whatsapp: 9481252093
Discussion about this post