ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2020-21ನೇ ಸಾಲಿನ ಕೌಶಲ್ಯ ತರಬೇತಿ ಯೋಜನೆಯಡಿ ಮಂಡ್ಯದ ಅನನ್ಯ ಕ್ರಿಯೇಷನ್ಸ್ರವರಿಂದ 3 ತಿಂಗಳ ಅವಧಿಯ ಟೆಲಿವಿಷನ್, ಜರ್ನಲಿಸಂ, ಕ್ಯಾಮರಾಮೆನ್ ತರಬೇತಿಗಳಿಗೆ ಆಸಕ್ತ ಅರ್ಹ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ನಿಗಧಿತ ನಮೂನೆ ಅರ್ಜಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಗಾಂಧಿನಗರ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 3ರೊಳಗಾಗಿ ಸಲ್ಲಿಸುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ದೂ.ಸಂ.: 08182-224349ನ್ನು ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post