ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು 2020-21ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಹನಿ, ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಸಹಾಯಧನ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ರೈತರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಸಹಾಯಧನ ಸೌಲಭ್ಯ ಪಡೆಯಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ, ರೈತರುಗಳು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿಯ ಪಡೆಯಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post