ಹೊಸನಗರ: ಕೆಎಫ್’ಡಿ(ಮಂಗನ ಕಾಯಿಲೆ)ಗೆ ಈಗಾಗಲೇ ಜಿಲ್ಲೆಯಲ್ಲಿ ಹಲವರು ಸಾವನ್ನಪ್ಪಿರುವ ಬೆನ್ನಲ್ಲೇ ಹೊಸನಗರ ತಾಲೂಕಿನಲ್ಲಿ ಮಂಗವೊಂದರೆ ಕೊಳೆತ ಶವ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ತಾಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲಮನೆಯ ರಸ್ತೆ ಪಕ್ಕದಲ್ಲಿ ಅರ್ಧ ಕೊಳೆತ ಸ್ಥಿತಿಯಲ್ಲಿ ಮಂಗವೊಂದರ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರನ್ನು ಆತಂಕಕ್ಕೆ ಕಾರಣವಾಗಿದ್ದು, ತತಕ್ಷಣ ಕ್ರಮ ಕೈಗೊಳ್ಳಬೇಕಿದೆ.
ಆತಂಕಕ್ಕೆ ಒಳಗಾದ ಸ್ಥಳೀಯರು ಆರೋಗ್ಯಾಧಿಕಾರಿಗಳ ಗಮನಕ್ಕೆ ತರಲಾಯಿತು. ಕೋಡೂರಿನ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಂಗನ ಶವವನ್ನು ದಹಿಸಲಾಯಿತು.
ಈಗಾಗಲೇ ಮಲೆನಾಡು ಭಾಗದಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಮಂಗನ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಾಹಿತಿ: ಮಹೇಶ್ ಹಿಂಡ್ಲೆಮನೆ
















