ಶಿವಮೊಗ್ಗ: ರಾಜ್ಯದಲ್ಲಿ ಉಪಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನಾಗಿ ಬಿ.ವೈ. ರಾಘವೇಂದ್ರ ಅವರನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಅಧಿಕೃತ ಘೋಷಣೆ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಅವರೇ ಬಿಜೆಪಿ ಅಭ್ಯರ್ಥಿ. ಕಳೆದ ಚುನಾವಣೆಯಲ್ಲಿ ನನ್ನನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಿದಂತೆ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸ್ಥಾನಕ್ಕೆ ಈಗ ಉಪಚುನಾವಣೆ ಘೋಷಣೆಯಾಗಿದೆ.
Discussion about this post