ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿನಯ್ ರಾಜಾವತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿಗಳು ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೂರ್ತಿ ವೃತ್ತದ ಬಳಿಯಿರುವ ವಿನಯ್ ಅವರ ಕಚೇರಿಗೆ ತೆರಳಿದ ಜನನಗರ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಸಿಮ್ಸ್ ಗುತ್ತಿಗೆ ನೌಕರರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿನಯ್ ರಾಜಾವತ್ ಅವರನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದರು. ಆನಂತರ ಅ.16ರಂದು ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post