ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದ ಪುರಸಭೆ ಆಡಳಿತ ಬಿಜೆಪಿ ಮಡಿಲಿಗೆ ಒಲಿದಿದೆ.
ಮಧ್ಯಾಹ್ನ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಅಧ್ಯಕ್ಷರಾಗಿ ಲಕ್ಷ್ಮೀ ಮಹಾಲಿಂಗಪ್ಪ ಹಾಗೂ ಉಪಾಧ್ಯಕ್ಷರಾಗಿ ಮೊಹಮದ್ ಸಾದಿಕ್ ಆಯ್ಕೆಯಾಗಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಲಕ್ಷ್ಮೀ ಮಹಾದೇವಪ್ಪ ಹಾಗೂ ಸಾದಿಕ್ ಪರವಾಗಿ 12 ಮತಗಳು ಲಭ್ಯವಾದರೆ, ಕಾಂಗ್ರೆಸ್’ನ ಕಮಲಮ್ಮ ಹಾಗೂ ದಸ್ತಗಿರಿ ಅವರ ಪರವಾಗಿ 9 ಮತಗಳು ಲಭಿಸಿತು. ಈ ಮೂಲಕ ಶಿಕಾರಿಪುರ ಪುರಸಭೆ ಬಿಜೆಪಿಗೆ ಒಲಿದಿದೆ.
ಪುರಸಭೆಯಲ್ಲಿ ನಡೆದ ಚುನಾವಣೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು. ಸಂಸದ ಬಿ.ವೈ. ರಾಘವೇಂದ್ರ ಅವರು ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post