ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ನಿರ್ದೇಶನದಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧೀನ ಕಾರ್ಯದರ್ಶಿಗಳು, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಂತರ್ ನಿಯಮಗಳ ಅನ್ವಯ ವಿಶೇಷ ಅಧಿಕಾರ ಬಳಸಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ತಮ್ಮ ರಾಜಕೀಯ ಹಾಗೂ ಸಾಮಾಜಿಕ ಜೀವನದಲ್ಲಿ ಶ್ರಮ ಹಾಗೂ ಜನಪರ ಸೇವೆಯ ಮೂಲಕ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದ ದತ್ತಾತ್ರಿ ಅವರನ್ನು ಈಗ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸ್ಥಾನ ಅರಸಿ ಬಂದಿರುವುದಕ್ಕೆ ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post