ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿಯು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-6,7,11ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಮಾರ್ಗಗಳಿಂದ ಸರಬರಾಜಾಗುವ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಫೆ.21ರ ಭಾನುವಾರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸಾಗರ ರಸ್ತೆ ಕೈಗಾರಿಕಾ ಪ್ರದೇಶ, ಎಪಿಎಂಸಿ ಮಾರುಕಟ್ಟೆ, ಶಿವ ಟೈರ್ಸ್, ಪೊಲೀಸ್ ಚೌಕಿ, ಮೇದಾರ ಕೇರಿ, ವಿಕಾಸ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ.೩ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















